ರಸ್ತೆಗೆ ಬಿದ್ದ ಮರದ ರೆಂಬೆ-ಕೊಂಬೆಗಳನ್ನು ತೆರವುಗೊಳಿಸದೆ ನಿರ್ಲಕ್ಷ್ಯ: ವಾಹನ ಸವಾರರ ಪರದಾಟ
Puttur: ಇಲ್ಲಿನ ಸಾಂತ್ಯ ಸಮೀಪ ಕಾವು-ಈಶ್ವರಮಂಗಲ ರಸ್ತೆಯಲ್ಲಿ ಮರ ಬಿದ್ದಿದೆ. ಸುಮಾರು ಒಂದು ತಿಂಗಳಿನಿಂದ ಅದರ ರೆಂಬೆ-ಕೊಂಬೆಗಳನ್ನು ತೆರವುಗೊಳಿಸಿದೆ, ನಿರ್ಲಕ್ಷ ವಹಿಸಲಾಗಿದೆ.
ಪುತ್ತೂರು: ಸಾಂತ್ಯ ಸಮೀಪ ಕಾವು-ಈಶ್ವರಮಂಗಲ ರಸ್ತೆಯಲ್ಲಿ ಮರ ಬಿದ್ದಿದೆ. ಸುಮಾರು ಒಂದು ತಿಂಗಳಿನಿಂದ ಅದರ ರೆಂಬೆ-ಕೊಂಬೆಗಳನ್ನು ತೆರವುಗೊಳಿಸಿದೆ, ನಿರ್ಲಕ್ಷ ವಹಿಸಲಾಗಿದೆ. ಈ ಮಾರ್ಗದಲ್ಲಿ ಸಂಚರಿಸುವ ನೂರಾರು ವಾಹನ ಸವಾರರು ದಿನನಿತ್ಯ ಪರದಾಡುವಂತಾಗಿದೆ.
ಇವು ರಸ್ತೆಯ ತಿರುವಿನಲ್ಲಿ ಬಿದ್ದಿದ್ದು, ಎದುರಿಗೆ ಬರುವ ವಾಹನಗಳಿಗೆ ಕಾಣಿಸುತ್ತಿಲ್ಲ. ಅಪಘಾತ ಸಂಭವಿಸುವ ಭೀತಿಯೂ ಎದುರಾಗಿದ್ದು, ರಾತ್ರಿ ಹಾಗೂ ಮಳೆ ಬರುವ ಸಂದರ್ಭದಲ್ಲಿ ದ್ವಿಚಕ್ರ ವಾಹನ ಸವಾರರಿಗೆ ತೀವ್ರ ಕಿರಿಕಿರಿ ಉಂಟಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.
ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಈ ರೆಂಬೆ-ಕೊಂಬೆಗಳನ್ನು ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆ, ಸ್ಥಳೀಯ ಗ್ರಾಮ ಪಂಚಾಯತಿ ಅಥವಾ ಅರಣ್ಯ ಇಲಾಖೆಯವರು ತೆರವುಗೊಳಿಸಬೇಕು. ಈ ಮೂಲಕ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.