Puttur: ಅ.17ಕ್ಕೆ ಪುತ್ತೂರು ಪಿಲಿಗೊಬ್ಬು ಸೀಸನ್-4.. ಪೂರ್ವಭಾವಿ ಸಭೆ

Puttur: 'ಪುತ್ತೂರು ಪಿಲಿಗೊಬ್ಬು ಸೀಸನ್–4'ರ ಪೂರ್ವಭಾವಿ ಸಭೆ 'ಅಶ್ಮಿ ಕಂಫರ್ಟ್'ನಲ್ಲಿ ನಡೆಯಿತು.

Sep 21, 2026 - 11:58
Puttur: ಅ.17ಕ್ಕೆ ಪುತ್ತೂರು ಪಿಲಿಗೊಬ್ಬು ಸೀಸನ್-4.. ಪೂರ್ವಭಾವಿ ಸಭೆ

ಪುತ್ತೂರು: ಇಲ್ಲಿನ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಅ.17 ರಂದು ಜರುಗುವ 'ಪುತ್ತೂರು ಪಿಲಿಗೊಬ್ಬು ಸೀಸನ್–4'ರ ಪೂರ್ವಭಾವಿ ಸಭೆ 'ಅಶ್ಮಿ ಕಂಫರ್ಟ್'ನಲ್ಲಿ ನಡೆಯಿತು.

ಕಾರ್ಯಕ್ರಮದ ಸಿದ್ಧತೆಗಳು, ಆಯೋಜನೆಯ ರೂಪುರೇಷೆಗಳು ಮತ್ತು ಯಶಸ್ವಿಯಾಗಿ ನಡೆಸುವ ಕುರಿತು ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಲಾಯಿತು. 

ಪಿಲಿಗೊಬ್ಬು ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಮತ್ತು ಪಿಲಿವೇಷ ತಂಡಗಳು ಭಾಗವಹಿಸುವಂತೆ ಅಗತ್ಯ ಪೂರ್ವಸಿದ್ಧತೆಗಳನ್ನು ಕೈಗೊಳ್ಳುವ ಬಗ್ಗೆಯೂ ಚರ್ಚೆ ಮಾಡಲಾಯಿತು.

ಪುತ್ತೂರಿನ ಸಾಂಸ್ಕೃತಿಕ ವೈಭವ ಹಾಗೂ ತುಳುನಾಡಿನ ವಿಶಿಷ್ಟ ಜನಪದ ಪರಂಪರೆಯನ್ನು ಪ್ರತಿಬಿಂಬಿಸುವ ಪಿಲಿಗೊಬ್ಬು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವಂತೆ ಕರೆ ನೀಡಲಾಯಿತು.

ಈ ಸಭೆಯಲ್ಲಿ ವಿಜಯಸಾಮ್ರಾಟ್ ಪುತ್ತೂರು ಸಂಸ್ಥೆಯ ಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ, ಪಿಲಿಗೊಬ್ಬು ಸಮಿತಿ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಪ್ರಧಾನ ಕಾರ್ಯದರ್ಶಿ ಶರತ್ ಆಳ್ವ ಕೂರೇಲು, ಕಾರ್ಯಾಧ್ಯಕ್ಷ ರತನ್ ರೈ ಕುಂಬ್ರ, ಸಹ ಸಂಚಾಲಕ ರಾಜೇಶ್ ರೈ ಪರ್ಪುಂಜ, ಉಪಾಧ್ಯಕ್ಷರಾದ ಶಂಕರ್ ಭಟ್ ಈಶಾನ್ಯ, ಪವನ್ ಶೆಟ್ಟಿ ಕಂಬಳತ್ತಡ್ಡ, ನಿತೇಶ್ ನೆಲಪ್ಪಾಲು. ಕಾರ್ಯದರ್ಶಿಗಳಾದ ಸುರೇಶ್ ಪಿದಪಟ್ಲ, ಧನುಷ್ ಹೊಸಮನೆ, ಆದರ್ಶ್ ಶೆಟ್ಟಿ ಉಪ್ಪಿನಂಗಡಿ, ಆನಂದ ಗೌಡ ತೆಂಕಿಲ, ಪ್ರೀತಮ್ ಶೆಟ್ಟಿ ಪೆರ್ನೆ, ಗೌತಮ್ ಗೌಡ, ಸಂಘಟನಾ ಕಾರ್ಯದರ್ಶಿಗಳಾದ ಅರುಣ್ ರೈ ಆನಾಜೆ, ಮಹೇಶ್ ಆಚಾರ್ಯ, ಕೋಶಾಧಿಕಾರಿಗಳಾದ ಅಶೋಕ್ ಅಡೂರು ಹಾಗೂ ರಾಜೇಶ್ ಗೌಡ ಸೇರಿದಂತೆ ಸಮಿತಿಯ ಇತರೆ  ಸದಸ್ಯರು ಉಪಸ್ಥಿತರಿದ್ದರು.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.