ಪುತ್ತೂರು: ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ನೂತನ ಶಾಲಾ ಕಟ್ಟಡದ ಉದ್ಘಾಟನೆ

ಪುತ್ತೂರಿನ ಪಟ್ಟೆಯಲ್ಲಿರುವ ಶ್ರೀ ಕೃಷ್ಣ ವಿದ್ಯಾಸಂಸ್ಥೆಯು ಸುಮಾರು 75 ವರ್ಷಗಳ ಇತಿಹಾಸ ಹೊಂದಿದ್ದು, ದ್ವಾರಕಾ ಪ್ರತಿಷ್ಠಾನವು ಈ ವಿದ್ಯಾಸಂಸ್ಥೆಯನ್ನು ವಹಿಸಿಕೊಂಡ ಬಳಿಕ  ಅಗತ್ಯ ಮೂಲಸೌಕರ್ಯ ಸೇರಿದಂತೆ ನೂತನ ಕಟ್ಟಡವನ್ನು ನಿರ್ಮಿಸಿಕೊಟ್ಟಿದೆ. ಜುಲೈ 9ರಂದು ಈ ಕಟ್ಟಡಗಳನ್ನು ದ್ವಾರಕಾ ಪ್ರತಿಷ್ಠಾನದ ಪ್ರಮುಖರು ಹಾಗೂ ಶಾಲಾ ಆಡಳಿತ ಮಂಡಳಿಯವರ ಸಮ್ಮುಖದಲ್ಲಿ ವಿದ್ಯುಕ್ತವಾಗಿ ಉದ್ಘಾಟಿಸಲಾಯಿತು.

Jul 9, 2026 - 16:33
Jul 9, 2026 - 16:48
ಪುತ್ತೂರು: ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ನೂತನ ಶಾಲಾ ಕಟ್ಟಡದ ಉದ್ಘಾಟನೆ
Patte sir Krishna vidya institutions inaugurates new school building

 ಪಟ್ಟೆ ಬಡಗನ್ನೂರು: ಸುಮಾರು 75 ವರ್ಷಗಳ ಇತಿಹಾಸ ಹೊಂದಿರುವ ಶ್ರೀಕೃಷ್ಣ ವಿದ್ಯಾ ಸಂಸ್ಥೆಯನ್ನು ದ್ವಾರಕಾ ಪ್ರತಿಷ್ಠಾನವು  ವಹಿಸಿಕೊಂಡಿದ್ದು, ಆ ನಂತರ ಪ್ರದೇಶಕ್ಕೆ ಒಂದು ಉತ್ತಮ ಶಿಕ್ಷಣ ವ್ಯವಸ್ಥೆ ಒದಗಿಸುವ ಕನಸು ಹಾಗೂ ಮಕ್ಕಳ ಸರ್ವತೋಮುಖ  ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಬೇಕೆಂಬ ದೂರದೃಷ್ಟಿಯೊಂದಿಗೆ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟನೆ ಮಾಡುತ್ತಿದ್ದೇವೆ ಎಂದು ಶ್ರೀ ಕೃಷ್ಣ  ವಿದ್ಯಾ ಸಂಸ್ಥೆಯ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಹೇಳಿದ್ದಾರೆ.

 ಇಂದು ನಡೆದ ನೂತನ ಶಾಲಾ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಶಾಲೆಯಲ್ಲಿ ಮಕ್ಕಳ ಕಲಿಕೆಯ ಜತೆಗೆ ವ್ಯಕ್ತಿತ್ವ ವಿಕಸನಕ್ಕೂ ಪೂರಕವಾಗುವ ವಾತಾವರಣ ಹಾಗೂ ಮೂಲಸೌಕರ್ಯವನ್ನು ಒದಗಿಸುವಲ್ಲಿ ಸಂಸ್ಥೆ ಆಡಳಿತ ಮಂಡಳಿ ಬದ್ಧವಾಗಿದೆ ಎಂದು ಹೇಳಿದರು.

  ಪ್ರಾಸ್ತಾವಿಕವಾಗಿ  ಮಾತನಾಡಿದ ದ್ವಾರಕಾ ಪ್ರತಿಷ್ಠಾನದ ಕಾರ್ಯದರ್ಶಿ ಹಾಗೂ ಶ್ರೀಕೃಷ್ಣ   ವಿದ್ಯಾಸಂಸ್ಥೆಗಳ ನಿರ್ದೇಶಕರಾದ  ಗಣರಾಜ ಕುಂಬ್ಳೆ ಅವರು, " ಶಾಲೆಯ ಮೂಲಭೂತ ಸೌಕರ್ಯಗಳಲ್ಲಿ ಕಟ್ಟಡವೂ ಒಂದು. ಕಟ್ಟಡವು ಸರಿಯಾಗಿ ಇದ್ದಾಗ ಪೋಷಕರಿಗೆ ತಮ್ಮ ಮಕ್ಕಳು ಒಳ್ಳೆಯ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂಬ ವಿಶ್ವಾಸ ಮೂಡತ್ತದೆ. ಈ ವಿದ್ಯಾಸಂಸ್ಥೆಯಲ್ಲಿ ಮಕ್ಕಳು ಭಾರತೀಯ ಸಂಸ್ಕೃತಿಯೊಂದಿಗೆ ಒಳ್ಳೆಯ ವಿದ್ಯಾಭ್ಯಾಸ ಪಡೆಯುವಂತಾಗಲಿ"  ಎಂದು ಶುಭ ಹಾರೈಸಿದರು.

  ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅಶ್ವಿನಿ ಗೋಪಾಲಕೃಷ್ಣ ಭಟ್,  ಸಂಸ್ಥೆಗಳ ಉಪಾಧ್ಯಕ್ಷರಾದ ಅಮೃತಕೃಷ್ಣ, ನಿರ್ದೇಶಕರಾದ ಪರಮೇಶ್ವರ ಭಟ್, ವೆಂಕಟಕೃಷ್ಣ ಶರ್ಮ, ಶಾಲಾ ಸಂಚಾಲಕರಾದ ವಿಘ್ನೇಶ್ ಹಿರಣ್ಯ, ಪ್ರೌಢಶಾಲೆಯ SDMC ಅಧ್ಯಕ್ಷರಾದ ಲಿಂಗಪ್ಪ ಗೌಡ ಮೂಡಿಕೆ, ಪ್ರಾಥಮಿಕ ಶಾಲಾ SDMC ಅಧ್ಯಕ್ಷರಾದ ಕೇಶವ ಪ್ರಸಾದ್ ನೀಲಗಿರಿ, ಶ್ರೀ ಕೃಷ್ಣ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಸತೀಶ್ ಕೊಪ್ಪಳ, ಪ್ರತಿಭಾ ಪ್ರೌಢಶಾಲೆಯ ಮುಖ್ಯ ಗುರುಗಳಾದ ಸುಮನಾ ಬಿ., ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾದ ರಾಜಗೋಪಾಲ್ ಎನ್., ಶ್ರೀ ಕೃಷ್ಣ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಗುರುಗಳಾದ ಪುಷ್ಪಾವತಿ ಡಿ.  ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯಗುರುಗಳಾದ ಸುಮನಾ ಬಿ. ಸ್ವಾಗತಿಸಿ, ಪ್ರಾಥಮಿಕ ಶಾಲಾ ಮುಖ್ಯಗುರುಗಳಾದ ರಾಜ ಗೋಪಾಲ್ ಎನ್. ಅವರು ಧನ್ಯವಾದ ಸಲ್ಲಿಸಿದರು. ಆಂಗ್ಲ ಮಾಧ್ಯಮ ವಿಭಾಗದ ಮಾತಾಜಿ ಸೌಮ್ಯ ಕಾರ್ಯಕ್ರಮ ನಿರೂಪಿಸಿದರು.

ಶ್ರೀ ಮಹಾಗಣಪತಿ ಹವನದೊಂದಿಗೆ ನೂತನ ಕಟ್ಟಡದ  ಉದ್ಘಾಟನೆ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಊರಿನ ಗಣ್ಯ ವ್ಯಕ್ತಿಗಳು ಹಾಗೂ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ಎಲ್ಲಾ ಬೋಧಕ-ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.