ಪುತ್ತೂರು: ಇಲ್ಲಿನ ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ & ಎಂಜಿನಿಯರಿಂಗ್ (ಡೇಟಾ ಸೈನ್ಸ್) ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ.ಎಸ್.ವಿ.ಪ್ರಸಾದ್ ಅವರು, ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾನಿಲಯದಿಂದ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಪ್ರಮಾಣಪತ್ರ ಪಡೆದಿದ್ದಾರೆ.
ಶ್ರೀನಿವಾಸ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಕೆ.ಸತ್ಯನಾರಾಯಣ ರೆಡ್ಡಿ ಅವರ ಮಾರ್ಗದರ್ಶನದಲ್ಲಿ, ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಶನ್ ವಿಭಾಗದಲ್ಲಿ ನಡೆಸಿದ ಸಂಶೋಧನೆಗೆ ಈ ಫೆಲೋಶಿಪ್ ಲಭಿಸಿದೆ.
ವೇದಗಣಿತವನ್ನು ಬಳಸಿಕೊಂಡು ಡಿಜಿಟಲ್ ಸಿಗ್ನಲ್ ಪ್ರೊಸೆಸಿಂಗ್ ಅನ್ವಯಿಕೆಗಳಿಗಾಗಿ, 'ಹೆಚ್ಚಿನ ಕಾರ್ಯಕ್ಷಮತೆಯ ಫ್ಲೋಟಿಂಗ್ ಪಾಯಿಂಟ್ ಗುಣಕಗಳ ವಿನ್ಯಾಸ ಮತ್ತು ಅನುಷ್ಠಾನ' ಎಂಬ ವಿಷಯದ ಕುರಿತು ಅವರು ಸಂಶೋಧನಾ ಪ್ರಬಂಧ ಮಂಡಿಸಿದ್ದರು.
ಡಿಜಿಟಲ್ ಸಿಗ್ನಲ್ ಪ್ರೊಸೆಸಿಂಗ್ ಕ್ಷೇತ್ರಕ್ಕೆ ಉಪಯುಕ್ತವಾಗಿರುವ ಅವರ ಶೈಕ್ಷಣಿಕ ಹಾಗೂ ಸಂಶೋಧನಾ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು ಅಭಿನಂದಿಸಿದ್ದಾರೆ.