ರಾಮಕೃಷ್ಣ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ
Puttur: ಇಲ್ಲಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಶನಿವಾರ ಸಂಭ್ರಮ - ಸಡಗರದಿಂದ ಆಚರಿಸಲಾಯಿತು.
ಪುತ್ತೂರು: ಇಲ್ಲಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಶನಿವಾರ ಸಂಭ್ರಮ - ಸಡಗರದಿಂದ ಆಚರಿಸಲಾಯಿತು. ಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಅವರು ಧ್ವಜಾರೋಹಣ ನೆರವೇರಿಸಿದರು. ಆ ಬಳಿಕ ರಾಷ್ಟ್ರ ನಾಯಕರ ಭಾವಚಿತ್ರಗಳಿಗೆ ಹೂಗಳನ್ನು ಅರ್ಪಿಸಿ, ಗೌರವ ಸಲ್ಲಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಾಜಿ ಜಿಲ್ಲಾ ಗವರ್ನರ್ ಡಾ.ಮೆಲ್ವಿನ್ ಡಿಸೋಜಾ ಅವರು, ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನದ ಶುಭಾಶಯಗಳನ್ನು ತಿಳಿಸಿ, ದೇಶದ ಅಭಿವೃದ್ಧಿಯಲ್ಲಿ ಯುವ ಜನರ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.

ಶಾಲಾ ಆಡಳಿತ ಮಂಡಳಿ ಸದಸ್ಯ ದಯಾನಂದ ರೈ ಕೋರ್ಮಂಡ, ವತ್ಸಲಾ ಪಿ ಶೆಟ್ಟಿ, ಲಯನ್ ಲ್ಯಾನ್ಸಿ ಮಸ್ಕರೇನಸ್, ಲಿಯೋ ಲಯನ್ ಡಾ.ರಂಜಿತಾ ಶೆಟ್ಟಿ, ಲಯನ್ ವೇದಾವತಿ, ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ನಳಿನಾಕ್ಷಿ ನಾಯಕ್, ಶಿಕ್ಷಕರು ಹಾಗೂ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.
ಶಾಲಾ ಬ್ಯಾಂಡ್ ತಂಡ ಮತ್ತು ಎನ್‌ಸಿಸಿ ಘಟಕದ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನವು ನಡೆಯಿತು. ಲಿಯೋ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲಾಯಿತು. ಮುಖ್ಯ ಶಿಕ್ಷಕಿ ಗಾಯತ್ರಿ ಎಸ್ ಸ್ವಾಗತಿಸಿದರು. ಶಿಕ್ಷಕಿ ಚಿತ್ರಕಲಾ ಎಸ್ ನಿರೂಪಿಸಿ, ವಂದಿಸಿದರು.
ವೇದಿಕೆ ಕಾರ್ಯಕ್ರಮದಲ್ಲಿ ಲಿಯೋ ಹಾಗೂ ಇಂಟರಾಕ್ಟ್ ಕ್ಲಬ್‌ನ ಪದಗ್ರಹಣ ನಡೆಯಿತು. ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.