ಪುತ್ತೂರು: ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ
Puttur: ಇಲ್ಲಿನ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಪುತ್ತೂರು (ಬಡಗನ್ನೂರು): ಇಲ್ಲಿನ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಸಂಸ್ಥೆಯ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಅವರು, ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
'ವಿದ್ಯಾರ್ಥಿಗಳು ಮಾನಸಿಕ ಹಾಗೂ ದೈಹಿಕವಾಗಿ ಸ್ವತಂತ್ರರಾಗುವ ಮೂಲಕ, ದೇಶಪ್ರೇಮವನ್ನು ಮೈಗೂಡಿಸಿಕೊಂಡು ಉತ್ತಮ ಪ್ರಜೆಗಳಾಗಿ ಬಾಳುವಂತೆ' ಕರೆ ನೀಡಿದರು.
ನಿವೃತ್ತ ಯೋಧ ಸುಂದರ ಪೂಜಾರಿ ಪಳಂಬೆ ಗೌರವಂದನೆ ಸ್ವೀಕರಿಸಿ, ತನ್ನ ಸೇವಾವಧಿಯ ಅನುಭವಗಳನ್ನು ಹಂಚಿಕೊಂಡರು.

ಕ್ರೀಡಾ ಕ್ಷೇತ್ರದಲ್ಲಿ ಸಾಧಕರಿಗೆ ಸನ್ಮಾನ :
ಈ ವೇಳೆ 14 ವರ್ಷ ಮತ್ತು 17 ವರ್ಷ ವಯೋಮಾನದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕ್ಷೇತ್ರ ಮಟ್ಟಕ್ಕೆ ಆಯ್ಕೆಯಾದ 8ನೇ ತರಗತಿ ವಿದ್ಯಾರ್ಥಿಗಳಾದ ಅದ್ವಿತ್ ಶೆಟ್ಟಿ, ಪ್ರಖ್ಯಾತ್, ಆದಿ ಕೆ.ಎ, ಸೃಜನ್ & 10ನೇ ತರಗತಿ ವಿದ್ಯಾರ್ಥಿನಿ ಸಾಥ್ವಿ ಹಾಗೂ ಅವರ ಪೋಷಕರನ್ನು ಅಭಿನಂದಿಸಲಾಯಿತು.
14 ವರ್ಷ ವಯೋಮಾನದಲ್ಲಿ 'ರಾಜ್ಯ ಮಟ್ಟದ ಎತ್ತರ ಜಿಗಿತ' ಸ್ಪರ್ಧೆಯಲ್ಲಿ, ತೃತೀಯ ಸ್ಥಾನ ಪಡೆದ 8ನೇ ತರಗತಿ ವಿದ್ಯಾರ್ಥಿನಿ ಹರ್ಷಿಕಾ ಅವರನ್ನು ಗೌರವಿಸಲಾಯಿತು.
ಮುಖ್ಯ ಅತಿಥಿಗಳಾಗಿ ಸಂಸ್ಥೆಯ ನಿರ್ದೇಶಕ ಗಣರಾಜ ಕುಂಬ್ಳೆ, ಪ್ರೌಢಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಲಿಂಗಪ್ಪ ಗೌಡ ಮೋಡಿಕೆ, ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಕೇಶವ ಪ್ರಸಾದ್ ನೀಲಗಿರಿ, ಸಂಸ್ಥೆಯ ಸಂಚಾಲಕ ವಿಘ್ನೇಶ್ ಹಿರಣ್ಯ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಸುಮನಾ ಬಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರಾಜಗೋಪಾಲ್ ಎನ್, ಆಂಗ್ಲ ಮಾಧ್ಯಮ ಶಾಲೆ ಮುಖ್ಯ ಶಿಕ್ಷಕಿ ಪುಷ್ಪಾವತಿ ಡಿ, ಇದ್ದರು.
ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರಾಜಗೋಪಾಲ ಎನ್ ವಂದಿಸಿದರು. ಶಿಕ್ಷಕಿ ಸ್ವರ್ಣಶ್ರೀ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕ ವೃಂದದವರು ಸಹಕರಿಸಿದರು. ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಲಾಯಿತು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.