ಪುತ್ತೂರು: ಸಂತ ಫಿಲೋಮಿನಾ ಕಾಲೇಜು NCC ಕೆಡೆಟ್‌ನಿಂದ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ

Puttur, St. Philomena College: ಇಲ್ಲಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಎನ್‌ಸಿಸಿ ನೌಕಾದಳ ವಿಭಾಗದ ಕೆಡೆಟ್ ಕ್ಯಾಪ್ಟನ್ ವಿ.ಎಸ್.ದಿಗಂತ್ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ.

Jul 16, 2026 - 15:53
ಪುತ್ತೂರು: ಸಂತ ಫಿಲೋಮಿನಾ ಕಾಲೇಜು NCC ಕೆಡೆಟ್‌ನಿಂದ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ

ಪುತ್ತೂರು: ಇಲ್ಲಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಎನ್‌ಸಿಸಿ ನೌಕಾದಳ ವಿಭಾಗದ ಕೆಡೆಟ್ ಕ್ಯಾಪ್ಟನ್ ವಿ.ಎಸ್.ದಿಗಂತ್, ಪ್ರತಿಷ್ಠಿತ ಆಲ್ ಇಂಡಿಯಾ ನೌಸೈನಿಕ್ ಕ್ಯಾಂಪ್-2026ರಲ್ಲಿ ಎರಡು ಪದಕಗಳನ್ನು ಗೆದ್ದಿದ್ದಾರೆ. ಈ ಮೂಲಕ ಕಾಲೇಜಿಗೆ ರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ತಂದಿದ್ದಾರೆ.
 
ಮಹಾರಾಷ್ಟ್ರದ ಲೋಣಾವಲಾದ ಐಎನ್‌ಎಸ್ ಶಿವಾಜಿಯಲ್ಲಿ ಜುಲೈ 1 ರಿಂದ 12 ರವರೆಗೆ ನಡೆದ ಈ ರಾಷ್ಟ್ರೀಯ ಶಿಬಿರದಲ್ಲಿ ಕರ್ನಾಟಕ ಹಾಗೂ ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸಿದ್ದ ಅವರು, ದೇಶದ ವಿವಿಧ ರಾಜ್ಯಗಳ ಎನ್‌ಸಿಸಿ (ನೌಕಾದಳ) ಕೆಡೆಟ್‌ಗಳೊಂದಿಗೆ ಸ್ಪರ್ಧಿಸಿದ್ದರು.  
 
ದೈಹಿಕ ಸಾಮರ್ಥ್ಯ, ಶಿಸ್ತು ಮತ್ತು ವೃತ್ತಿಪರ ಕೌಶಲ್ಯವನ್ನು ಪ್ರದರ್ಶಿಸಿದ್ದು, ಕ್ರಾಸ್ ಕಂಟ್ರಿ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಹಾಗೂ ಸರ್ವಿಸ್ ಸಬ್ಜೆಕ್ಟ್ ಪರೀಕ್ಷೆಯಲ್ಲಿ ಕಂಚಿನ ಪದಕ ಪಡೆದು ಗಮನ ಸೆಳೆದಿದ್ದಾರೆ. 
 
ಕೆಡೆಟ್ ದಿಗಂತ್ ಅವರಿಗೆ ಎನ್‌ಸಿಸಿ ನೌಕಾದಳ ವಿಭಾಗದ ಸಬ್ ಲೆಫ್ಟಿನೆಂಟ್ ತೇಜಸ್ವಿ ಭಟ್ ಮಾರ್ಗದರ್ಶನ ಹಾಗೂ ತರಬೇತಿ ನೀಡಿದ್ದರು. 
 
ಕಾಲೇಜಿನ ಪ್ರಾಂಶುಪಾಲರು, ಅಧ್ಯಾಪಕ ವೃಂದ ಮತ್ತು ವಿದ್ಯಾರ್ಥಿಗಳು ದಿಗಂತ್ ಅವರ ಈ ರಾಷ್ಟ್ರೀಯ ಸಾಧನೆಗೆ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆ ಮಾಡಲೆಂದು ಶುಭ ಹಾರೈಸಿದ್ದಾರೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.