ಎನ್ಎಸ್ಎಸ್ ಚಟುವಟಿಕೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕ: ಡಾ.ಹರಿಪ್ರಸಾದ್
St Philomena College: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ 'ರಾಷ್ಟ್ರೀಯ ಸೇವಾ ಯೋಜನೆ' (ಎನ್ಎಸ್ಎಸ್) ಘಟಕದ ಉದ್ಘಾಟನಾ ಸಮಾರಂಭ ನಡೆಯಿತು.
ಪುತ್ತೂರು: 'ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆ, ಶಿಸ್ತು & ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವಲ್ಲಿ ಎನ್ಎಸ್ಎಸ್ ಪ್ರಮುಖ ಪಾತ್ರ ವಹಿಸುತ್ತದೆ' ಎಂದು ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಎಸ್.ಹರಿಪ್ರಸಾದ್ ಹೇಳಿದರು.
ಇಲ್ಲಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಈಚೆಗೆ ನಡೆದ 'ರಾಷ್ಟ್ರೀಯ ಸೇವಾ ಯೋಜನೆ' (ಎನ್ಎಸ್ಎಸ್) ಘಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 'ಎನ್ಎಸ್ಎಸ್ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕೆ ಅತ್ಯಂತ ಪೂರಕವಾಗಿವೆ' ಎಂದರು.
ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ವಂ.ಆಂಟನಿ ಪ್ರಕಾಶ್ ಮೊಂತೇರೊ ಮಾತನಾಡಿ, 'ವಿದ್ಯಾರ್ಥಿ ದೆಸೆಯಲ್ಲೇ ಸಮಾಜಮುಖಿ ಚಿಂತನೆಗಳನ್ನು ಬೆಳೆಸಿಕೊಳ್ಳುವಂತೆ' ಕರೆ ನೀಡಿದರು.
ಎನ್ಎಸ್ಎಸ್ ಅಧಿಕಾರಿ ಡಾ.ಕೆ.ಚಂದ್ರಶೇಖರ್ ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಪುಷ್ಪ ಎನ್ ಸ್ವಾಗತಿಸಿದರು. ಘಟಕದ ನಾಯಕ ಸಾಯಿ ಪ್ರತೀಶ್ ಮುಖ್ಯ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು.
ವೇದಿಕೆಯಲ್ಲಿ ಘಟಕದ ನಾಯಕ ಬೃಂದನ್ ಮತ್ತು ಎನ್ಎಸ್ಎಸ್ ಕಾರ್ಯದರ್ಶಿ ಕಾರ್ತಿಕ್ ಉಪಸ್ಥಿತರಿದ್ದರು. ಘಟಕದ ನಾಯಕಿ ಸ್ಪಂದನಾ ನಿರೂಪಿಸಿದರು. ಶಿಲ್ಪಾ ಧನ್ಯವಾದ ಸಮರ್ಪಿಸಿದರು. ಆ ಬಳಿಕ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.