Puttur: ಸಂತ ಫಿಲೋಮಿನಾ ಕಾಲೇಜು.. ವಿದ್ಯಾರ್ಥಿ ಸಂಘದ ಚುನಾವಣೆ, ಅಧ್ಯಕ್ಷ & ಕಾರ್ಯದರ್ಶಿಯ ಆಯ್ಕೆ

Puttur: ಇಲ್ಲಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ 2026–27ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆ ಈಚೆಗೆ ನಡೆಯಿತು.

Sep 1, 2026 - 15:55
Puttur: ಸಂತ ಫಿಲೋಮಿನಾ ಕಾಲೇಜು.. ವಿದ್ಯಾರ್ಥಿ ಸಂಘದ ಚುನಾವಣೆ, ಅಧ್ಯಕ್ಷ & ಕಾರ್ಯದರ್ಶಿಯ ಆಯ್ಕೆ

ಪುತ್ತೂರು: ಇಲ್ಲಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ 2026–27ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆ ಈಚೆಗೆ ನಡೆಯಿತು.  

ಚುನಾವಣಾ ಪ್ರಕ್ರಿಯೆ ಆರಂಭದಲ್ಲಿ, ಕಾಲೇಜಿನ ಪ್ರಾಂಶುಪಾಲ ಹಾಗೂ ಮುಖ್ಯ ಚುನಾವಣಾಧಿಕಾರಿ ವಂ.ಡಾ.ಆ್ಯಂಟನಿ ಪ್ರಕಾಶ್ ಮೊಂತೇರೊ ಮಾತನಾಡಿದರು. 'ವಿದ್ಯಾರ್ಥಿ ಸಂಘದ ಚುನಾವಣೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳು ಸೋಲು-ಗೆಲುವನ್ನು ಲೆಕ್ಕಿಸದೆ, ಸಂಸ್ಥೆಯ ಮೌಲ್ಯಗಳನ್ನು ಎತ್ತಿಹಿಡಿಯುವ ದೃಷ್ಟಿಕೋನದೊಂದಿಗೆ, ಪ್ರಾಮಾಣಿಕತೆ ಹಾಗೂ ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು' ಎಂದು ಹೇಳಿದರು.

ನಾಯಕತ್ವವೆಂದರೆ ಅಧಿಕಾರ ಚಲಾಯಿಸುವುದಲ್ಲ. ಬದಲಾಗಿ ಸೇವೆ, ಸಹಕಾರ  ಹಾಗೂ ಸಹಪಾಠಿಗಳಿಗೆ ಮಾದರಿಯಾಗುವುದಾಗಿದೆ. ಶೈಕ್ಷಣಿಕ ಶ್ರೇಷ್ಠತೆ ಮತ್ತು ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಪೂರಕವಾಗುವಂತಹ ಚೈತನ್ಯಮಯ ಕ್ಯಾಂಪಸ್ ವಾತಾವರಣ ನಿರ್ಮಿಸಲು, ವಿದ್ಯಾರ್ಥಿಗಳು ಶ್ರಮಿಸಬೇಕು ಎಂದು ತಿಳಿಸಿದರು.

ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ತೃತೀಯ ಬಿಕಾಂ ವಿದ್ಯಾರ್ಥಿ ಮಹಮ್ಮದ್ ಇಬ್ರಾಹಿಂ ರಾಝ್ ಮತ್ತು ತೃತೀಯ ಬಿಬಿಎ ವಿದ್ಯಾರ್ಥಿ ಲಿಖಿತ್ ಜೆ.ಡಿ ಸ್ಪರ್ಧಿಸಿದ್ದರು.

ಕಾರ್ಯದರ್ಶಿ ಸ್ಥಾನಕ್ಕಾಗಿ ತೃತೀಯ ಬಿಬಿಎ ವಿದ್ಯಾರ್ಥಿನಿ ಪ್ರಿಯಾ ಎಂ.ಕೆ, ತೃತೀಯ ಬಿಸಿಎ ವಿದ್ಯಾರ್ಥಿ ಹಸನ್ ಅಮ್ರಾ ಶಿಹಾಬುದ್ದೀನ್ ಮತ್ತು ತೃತೀಯ ಬಿ.ಕಾಂ ವಿದ್ಯಾರ್ಥಿ ಜಯಕೃಷ್ಣ ಇ ಕಣಕ್ಕಿಳಿದಿದ್ದರು.

ಹಾಗೆಯೇ ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ತೃತೀಯ ಬಿಎಸ್ಸಿ ವಿದ್ಯಾರ್ಥಿನಿ ದಿಲ್ಶಾನಾ ಕೆ.ಎಸ್ ಮತ್ತು ತೃತೀಯ ಬಿಎಸ್ಸಿ ವಿದ್ಯಾರ್ಥಿನಿ ಎಂ.ನಿಶ್ಮಿತಾ ರೈ  ಸ್ಪರ್ಧೆ ಮಾಡಿದ್ದರು.

ಈ ಚುನಾವಣೆ ಕಾಲೇಜಿನ ಪ್ರಾಂಶುಪಾಲ ವಂ.ಡಾ.ಆ್ಯಂಟನಿ ಪ್ರಕಾಶ್ ಮೊಂತೇರೊ ಅವರ ಮೇಲ್ವಿಚಾರಣೆಯಲ್ಲಿ ನಡೆಯಿತು. ಡಾ.ರಾಧಾಕೃಷ್ಣ ಗೌಡ ಹಾಗೂ ಸ್ಪಿಯರ್ಲ್ ಫಿಯೋನಾ ಪೆರೇರಾ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳು, ಉಪ ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದರು.

ಉಪ ಪ್ರಾಂಶುಪಾಲ ಡಾ.ವಿಜಯಕುಮಾರ್ ಮೊಳೆಯಾರ್ ಹಾಗೂ ಪರೀಕ್ಷಾಂಗ ಕುಲಸಚಿವ ಡಾ.ವಿನಯಚಂದ್ರ, ಮತಪತ್ರಗಳ ಉಸ್ತುವಾರಿ ವಹಿಸಿದ್ದರು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಡಾ.ಕೆ.ಚಂದ್ರಶೇಖರ್,  ಐಕ್ಯೂಎಸಿ ಸಂಯೋಜಕ ಡಾ.ಎಡ್ವಿನ್ ಡಿಸೋಜಾ ಹಾಗೂ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಶ್ರೀ ವಾಸುದೇವ ಎನ್ ಚುನಾವಣಾ ಅಧಿಕಾರಿಗಳಾಗಿದ್ದರು.

ಮತ ಎಣಿಕೆ ಕಾರ್ಯದ ಉಸ್ತುವಾರಿಯನ್ನು ಶೈಕ್ಷಣಿಕ ವಿಭಾಗದ ಕುಲಸಚಿವ ಡಾ.ನಾರ್ಬರ್ಟ್ ಮಸ್ಕರೇನಸ್ ಮತ್ತು ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಭಾರತಿ ಎಸ್.ರೈ ವಹಿಸಿದ್ದರು. 

ಮತ ಎಣಿಕೆಯ ಬಳಿಕ ಲಿಖಿತ್ ಜೆ.ಡಿ ವಿದ್ಯಾರ್ಥಿ ಪರಿಷತ್ ಅಧ್ಯಕ್ಷರಾಗಿ ಆಯ್ಕೆಯಾದರು. ಕಾರ್ಯದರ್ಶಿಯಾಗಿ ಜಯಕೃಷ್ಣ ಇ ಮತ್ತು ಜಂಟಿ ಕಾರ್ಯದರ್ಶಿಯಾಗಿ ಎಂ.ನಿಶ್ಮಿತಾ ರೈ ಅವರನ್ನು ಚುನಾಯಿಸಲಾಯಿತು. 

ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳನ್ನು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದರು.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.