Puttur: ಸಂತ ಫಿಲೋಮಿನಾ ಕಾಲೇಜು.. ಯಕ್ಷ ಸಮ್ಮಾನ

Puttur: ಸಂತ ಫಿಲೋಮಿನಾ ಕಾಲೇಜು ಹಾಗೂ ಯಕ್ಷ ಕಲಾಕೇಂದ್ರ ಸಹಯೋಗದಲ್ಲಿ, ತೆಂಕುತಿಟ್ಟಿನ ಅಗ್ರಮಾನ್ಯ ಭಾಗವತ ಪ್ರಸಾದ ಬಲಿಪ ಸ್ಮರಣೆ ಹಾಗೂ ಸನ್ಮಾನ ಕಾರ್ಯಕ್ರಮವು ಈಚೆಗೆ ಸ್ನಾತಕೋತ್ತರ ಸಭಾಭವನದಲ್ಲಿ ನಡೆಯಿತು.

Oct 2, 2026 - 18:06
Puttur: ಸಂತ ಫಿಲೋಮಿನಾ ಕಾಲೇಜು.. ಯಕ್ಷ ಸಮ್ಮಾನ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು ಹಾಗೂ ಯಕ್ಷ ಕಲಾಕೇಂದ್ರ ಸಹಯೋಗದಲ್ಲಿ, ತೆಂಕುತಿಟ್ಟಿನ ಅಗ್ರಮಾನ್ಯ ಭಾಗವತ ಪ್ರಸಾದ ಬಲಿಪ ಅವರ ಸ್ಮರಣೆ ಕಾರ್ಯಕ್ರಮವು ಈಚೆಗೆ ಸ್ನಾತಕೋತ್ತರ ಸಭಾಭವನದಲ್ಲಿ ನಡೆಯಿತು.

ಕಟೀಲು ಮೇಳದಲ್ಲಿ ಸೇವೆ ಸಲ್ಲಿಸಿ, ಯಕ್ಷಗಾನದ ಪಾರಂಪರಿಕ ಭಾಗವತಿಕೆಗೆ ಅಮೂಲ್ಯ ಕೊಡುಗೆ ನೀಡಿದ ಪ್ರಸಾದ ಬಲಿಪ ನೆನಪಿನಲ್ಲಿ ತೆಂಕುತಿಟ್ಟಿನ ಪ್ರಸಿದ್ಧ ವೇಷಧಾರಿ ಜಯಪ್ರಕಾಶ ಶೆಟ್ಟಿ ಪೆರ್ಮುದೆ ಅವರನ್ನು ಸನ್ಮಾನಿಸಲಾಯಿತು.

ಪ್ರಸಾದ ಬಲಿಪ ಸ್ಮರಣೆಯನ್ನು ಯಕ್ಷಗಾನ ಸಂಘಟಕ ಶಾಂತರಾಮ ಕುಡ್ವ ನಿರ್ವಹಿಸಿದರು. 

ಕಾರ್ಯಕ್ರಮದ ಸಂಘಟಕ ಕೃಷ್ಣಕುಮಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾಲೇಜಿನ ಪ್ರಾಂಶುಪಾಲ ರೆ.ಡಾ.ಆಂಟೊನಿ ಪ್ರಕಾಶ್ ಮೊಂತೇರೋ, ಮಾರ್ಗದರ್ಶನದಲ್ಲಿ ಯಕ್ಷ ಕಲಾಕೇಂದ್ರದ ಕಾರ್ಯ ಚಟುವಟಿಕೆಗಳು ಪ್ರಶಂಸನೀಯ ಎಂದು ಹೇಳಿದರು.

ಸಮ್ಮಾನ ಸ್ವೀಕರಿಸಿ ಮಾತನಾಡಿದ ಜಯಪ್ರಕಾಶ್ ಶೆಟ್ಟಿ ಪೆರ್ಮೂದೆ, ಪ್ರಸಾದ ಬಲಿಪರ ಒಡನಾಟವನ್ನು ಸ್ಮರಿಸಿಕೊಂಡರು.

ಸಮಿತಿಯ ಗೌರವ ಸಲಹೆಗಾರ ರುಕ್ಕಯ್ಯ ಪೂಜಾರಿ ಮಾತನಾಡಿ, ಕಲಾ ಕ್ಷೇತ್ರದ ಬೆಳವಣಿಗೆಗೆ ನೀಡಿದ ಕೊಡುಗೆಗೆ 'ಸಂತ ಫಿಲೋಮಿನಾ' ಕಾಲೇಜನ್ನು ಅಭಿನಂದಿಸಿದರು. 

ವೇದಿಕೆಯಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ರಿಚರ್ಡ್ ಕರ್ಡೋಜಾ ಉಪಸ್ಥಿತರಿದ್ದರು. ಕಾಲೇಜಿನ ಉಪಪ್ರಾಂಶುಪಾಲ ಡಾ.ವಿಜಯ್ ಕುಮಾರ್  ಮೊಳೆಯಾರ್ ಅಧ್ಯಕ್ಷತೆ ವಹಿಸಿದ್ದರು.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.