ಸಂತ ಫಿಲೋಮಿನಾ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Puttur: ಸಂತ ಫಿಲೋಮಿನಾ ಪದವಿ ಹಾಗೂ ಸಂತ ಫಿಲೋಮಿನಾ ಪದವಿ-ಪೂರ್ವ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ 80ನೇ 'ಸ್ವಾತಂತ್ರ್ಯ ದಿನಾಚರಣೆ'ಯನ್ನು ಅತ್ಯಂತ ಸಂಭ್ರಮ-ಸಡಗರದಿಂದ ಆಚರಿಸಲಾಯಿತು.

Aug 17, 2026 - 13:01
ಸಂತ ಫಿಲೋಮಿನಾ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಪುತ್ತೂರು: ಸಂತ ಫಿಲೋಮಿನಾ ಪದವಿ ಹಾಗೂ ಸಂತ ಫಿಲೋಮಿನಾ ಪದವಿ-ಪೂರ್ವ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ 80ನೇ 'ಸ್ವಾತಂತ್ರ್ಯ ದಿನಾಚರಣೆ'ಯನ್ನು ಅತ್ಯಂತ ಸಂಭ್ರಮ-ಸಡಗರದಿಂದ ಆಚರಿಸಲಾಯಿತು.

ಪದವಿ-ಪೂರ್ವ ಕಾಲೇಜಿನ ಪ್ರಾಂಶುಪಾಲ ವಂ.ಫಾ.ಅಶೋಕ್ ರಾಯನ್ ಕ್ರಾಸ್ತಾ ಧ್ವಜಾರೋಹಣ ನೆರವೇರಿಸಿ, ಮಾತನಾಡಿದರು.

'ನಮ್ಮ ದೇಶದಲ್ಲಿ ಸ್ವಾತಂತ್ರ್ಯದ ನಂತರ ವಿವಿಧ ಅಭಿವೃದ್ಧಿಗಳನ್ನು ಕಾಣಬಹುದಾಗಿದ್ದು, ಶಿಕ್ಷಣದಲ್ಲೂ ಪ್ರಗತಿಯಾಗಿದೆ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುತ್ತಿದ್ದು, ಸಾಕ್ಷರತೆಯು ಹೆಚ್ಚುತ್ತಿದೆ' ಎಂದು ಹೇಳಿದರು.

ಉಪ ಪ್ರಾಂಶುಪಾಲ ಡಾ.ಎಂ.ವಿಜಯ್ ಕುಮಾರ್ ಮಾತನಾಡಿ, 'ಯಂತ್ರಗಳು ಮನುಷ್ಯರಿಗಿಂತ ಅತ್ಯಂತ ವೇಗವಾಗಿ ಯೋಚಿಸಬಲ್ಲವು. ಆದರೆ ವಿವೇಕ ಇರುವುದಿಲ್ಲ. ದೇಶವನ್ನು ಕಟ್ಟಲು ಡಿಗ್ರಿ ಸರ್ಟಿಫಿಕೇಟ್ ಇದ್ದರೆ ಸಾಲದು, ಪುಸ್ತಕದಂತಹ ಮಾನಸಿಕ ಶಕ್ತಿ ಬೇಕು. ಸಕಾರಾತ್ಮಕ ಚಿಂತನೆಗಳನ್ನು ಅಳವಡಿಸಿಕೊಳ್ಳಿ. ಸೋಲುಗಳಿಗೆ ಹೆದರಬೇಡಿ' ಎಂದರು.

ಪದವಿ ಕಾಲೇಜಿನ ಪ್ರಾಂಶುಪಾಲ ವಂ.ಫಾ.ಡಾ.ಆಂಟೋನಿ ಪ್ರಕಾಶ್ ಮೊಂತೇರೊ ಮಾತನಾಡಿ, 'ನಾವೆಲ್ಲರೂ ಪವಿತ್ರವಾಗಿ ಸಮೃದ್ಧಿ ಹೊಂದುವ ಮೂಲಕ ದೇವರ ಕೃಪೆಯನ್ನು ಅರಿತು, ನಮ್ಮ ದೇಶವನ್ನು ಅಭಿವೃದ್ಧಿಪಡಿಸೋಣ' ಎಂದು ತಿಳಿಸಿದರು.

ಫಾದರ್ ಪತ್ರಾವೋ ಆಸ್ಪತ್ರೆಯ ಕೌನ್ಸೆಲ್ಲರ್ ಚಂದನ್ ಸಿ ಅಂಚನ್, 'ನಶಾ ಮುಕ್ತ ಭಾರತ ಅಭಿಯಾನ'ದ ಪ್ರತಿಜ್ಞಾವಿಧಿ ಸ್ವೀಕಾರ ಸಮಾರಂಭವನ್ನು ನೆರವೇರಿಸಿದರು.

3/19 ಕರ್ನಾಟಕ ಬೆಟಾಲಿಯನ್ ಎನ್‍ಸಿಸಿ, 5 ಕರ್ನಾಟಕ ನೇವಲ್ ಎನ್‍ಸಿಸಿ ಯೂನಿಟ್, ಎನ್ಎಸ್ಎಸ್, ರೋವರ್ಸ್ & ರೇಂಜರ್ಸ್, ಯೂತ್ ರೆಡ್ ಕ್ರಾಸ್, ಪರ್ಫಾಮಿಂಗ್ ಆರ್ಟ್ಸ್ ಮತ್ತು ಬ್ಯಾಂಡ್ ಟ್ರೂಪ್ ಭಾಗವಹಿಸಿದ್ದವು. ದಿಗಂತ್ ವಿ.ಎಸ್ ಪೆರೇಡ್‌ನ ನೇತೃತ್ವ ವಹಿಸಿದ್ದರು.

ಎನ್‍ಸಿಸಿ ಕ್ಯಾಪ್ಟನ್ ಜಾನ್ಸನ್ ಡೇವಿಡ್ ಸಿಕ್ವೇರಾ, ಸಬ್ ಲೆಫ್ಟಿನೆಂಟ್ ತೇಜಸ್ವಿ, ಐಕ್ಯೂಎಸಿ ಸಂಯೋಜಕ ಡಾ.ಎಡ್ವಿನ್ ಎಸ್ ಡಿಸೋಜಾ, ಶೈಕ್ಷಣಿಕ ಕುಲಸಚಿವ ಡಾ.ನೋರ್ಬರ್ಟ್ ಮಸ್ಕರೇನ್ಹಸ್, ಪರೀಕ್ಷಾಂಗ ಕುಲಸಚಿವ ಡಾ.ವಿನಯಚಂದ್ರ ಹಾಗೂ ಲಲಿತ ಕಲಾ ಸಂಘದ ಸಂಚಾಲಕ ಪ್ರಶಾಂತ್ ರೈ ಉಪಸ್ಥಿತರಿದ್ದರು.

ಪದವಿ & ಪದವಿ ಪೂರ್ವ ಕಾಲೇಜಿನ ಲಲಿತ ಕಲಾ ಸಂಘದ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಹಿಂದಿ ವಿಭಾಗದ ಮುಖ್ಯಸ್ಥ ಡಾ.ಡಿಂಪಲ್ ಫೆರ್ನಾಂಡಿಸ್ ವಂದಿಸಿದರು. ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಪೂಜಾಶ್ರೀ ರೈ ನಿರೂಪಿಸಿದರು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.