Puttur: ಪುತ್ತೂರು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Puttur: ಈದ್ ಮಿಲಾದ್ ಹಬ್ಬದ ಆಚರಣೆ ಹಾಗೂ ದರ್ಬೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ, ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

Aug 25, 2026 - 12:11
Puttur:  ಪುತ್ತೂರು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಪುತ್ತೂರು: ಈದ್ ಮಿಲಾದ್ ಹಬ್ಬದ ಆಚರಣೆ ಹಾಗೂ ದರ್ಬೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ, ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಇಂದು (ಮಂಗಳವಾರ) ಹಿಂದೂ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿವೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ಗಾಂಧಿಕಟ್ಟೆ ಬಳಿ ಸ್ಪೆಷಲ್ ಆಕ್ಷನ್ ಫೋರ್ಸ್ (ಎಸ್ಎಎಸ್) ಸಿಬ್ಬಂದಿ ಬಂದೋಬಸ್ತ್ ಕೈಗೊಂಡಿದ್ದಾರೆ. ದರ್ಬೆ ಸುತ್ತಮುತ್ತ ಕೆಎಸ್‌ಆರ್‌ಪಿ ಹಾಗೂ ಡಿಎಆರ್ ಪೊಲೀಸರು ಭದ್ರತೆ ಕಲ್ಪಿಸಿದ್ದಾರೆ. 

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪ, ಬೆಂಕಿ ಅವಘಡಗಳು ಸಂಭವಿಸಂದಂತೆ ಮುಂಜಾಗ್ರತೆಯಾಗಿ, ಅಗ್ನಿಶಾಮಕ ವಾಹನವನ್ನು ನಿಯೋಜಿಸಲಾಗಿದೆ.

ನಗರದ ಪ್ರಮುಖ ವೃತ್ತಗಳು, ಜನಸಂದಣಿ ಪ್ರದೇಶಗಳು ಮತ್ತು ಸೂಕ್ಷ್ಮ ಸ್ಥಳಗಳಲ್ಲಿ ಪೊಲೀಸರು ನಿರಂತರ ನಿಗಾ ವಹಿಸುತ್ತಿದ್ದು, ಕಾನೂನು - ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ಕ್ರಮವನ್ನು ಕೈಗೊಂಡಿದ್ದಾರೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.