Puttur: ಪುತ್ತೂರು ಟೌನ್ ಬ್ಯಾಂಕ್‌ಗೆ ವಿಶೇಷ ಸಾಧನಾ ಪ್ರಶಸ್ತಿ
Puttur: ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ಸಾಧಿಸಿರುವ ಅಭೂತಪೂರ್ವ ಸಾಧನೆಯನ್ನು ಗುರುತಿಸಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ 2025-26ನೇ ಸಾಲಿನ 'ವಿಶೇಷ ಸಾಧನಾ ಪ್ರಶಸ್ತಿ' ನೀಡಿ ಗೌರವಿಸಲಾಯಿತು.
ಪುತ್ತೂರು: ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 'ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್' ಸಾಧಿಸಿರುವ ಅಭೂತಪೂರ್ವ ಸಾಧನೆಯನ್ನು ಗುರುತಿಸಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ 2025-26ನೇ ಸಾಲಿನ 'ವಿಶೇಷ ಸಾಧನಾ ಪ್ರಶಸ್ತಿ' ನೀಡಿ ಗೌರವಿಸಲಾಯಿತು.
ಪಟ್ಟಣ ಸಹಕಾರಿ ಬ್ಯಾಂಕ್ ವಿಭಾಗದಲ್ಲಿ ಬ್ಯಾಂಕ್‌ನ ಉತ್ತಮ ಕಾರ್ಯನಿರ್ವಹಣೆ, ಪ್ರಗತಿ ಮತ್ತು ಸಹಕಾರಿ ಬ್ಯಾಂಕಿಂಗ್ ಕ್ಷೇತ್ರಕ್ಕೆ ನೀಡುತ್ತಿರುವ ಗಮನಾರ್ಹ ಕೊಡುಗೆಯನ್ನು ಪರಿಗಣಿಸಿ, ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯ ಸಮಾರಂಭದಲ್ಲಿ ಪುರಸ್ಕಾರ ನೀಡಲಾಗಿದೆ.
ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್‌ನ ಅಧ್ಯಕ್ಷ ಎನ್.ಕಿಶೋರ್ ಕೊಳತ್ತಾಯ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಶೇಖರ ಶೆಟ್ಟಿ ಪ್ರಶಸ್ತಿಯನ್ನು ಸ್ವೀಕರಿಸಿದರು.
ಪುತ್ತೂರು ಟೌನ್ ಬ್ಯಾಂಕ್‌ನ ಉಪಾಧ್ಯಕ್ಷ ಶ್ರೀಧರ ಗೌಡ, ಹಿರಿಯ ನಿರ್ದೇಶಕ ಚಂದ್ರಶೇಖರ ರಾವ್ ಬಪ್ಪಳಿಗೆ ಹಾಗೂ ಕಿರಣ್ ಕುಮಾರ್ ರೈ ಉಪಸ್ಥಿತರಿದ್ದರು
ಜಿಲ್ಲಾ ಸಹಕಾರಿ ಸಂಘಗಳ ಉಪನಿಬಂಧಕ ಹೆಚ್.ಎನ್.ರಮೇಶ್, ಸಹಕಾರಿ ಯೂನಿಯನ್ ಅಧ್ಯಕ್ಷ ಮತ್ತು ಬ್ಯಾಂಕ್‌ನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಸೇರಿದಂತೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಎಲ್ಲಾ ನಿರ್ದೇಶಕರು ಪ್ರಶಸ್ತಿ ಪ್ರಧಾನ ನೆರವೇರಿಸಿದರು.
ಬ್ಯಾಂಕ್‌ನ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪುರಸ್ಕಾರ ಸ್ವೀಕರಿಸಿದ ಸಂದರ್ಭದಲ್ಲಿ, ನಿರ್ದೇಶಕರು ಹಾಗೂ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿಯೂ ಬ್ಯಾಂಕ್‌ನ ಬೆಳವಣಿಗೆ ಹಾಗೂ ಗ್ರಾಹಕರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ಸಂಕಲ್ಪ ಮಾಡಿದರು.