ಮಾತೃತ್ವ ಭಾವ ಹೊಂದಿರುವ ದೇಶ ಭಾರತ: ಗಣರಾಜ ಕುಂಬ್ಳೆ

Puttur: ತೆಂಕಿಲ ನರೇಂದ್ರ ಪದವಿ-ಪೂರ್ವ ಕಾಲೇಜುನಲ್ಲಿ ಈಚೆಗೆ ನಡೆದ ವಿವೇಕ ಸ್ಮೃತಿ ಕಾರ್ಯಕ್ರಮದಲ್ಲಿ ರಾಮಕುಂಜದ ನಿವೃತ್ತ ಪ್ರಾಂಶುಪಾಲ ಗಣರಾಜ ಕುಂಬ್ಳೆ ಅವರು ಮಾತನಾಡಿದರು.

Sep 25, 2026 - 16:19
ಮಾತೃತ್ವ ಭಾವ ಹೊಂದಿರುವ ದೇಶ ಭಾರತ: ಗಣರಾಜ ಕುಂಬ್ಳೆ

ಪುತ್ತೂರು: ಜಗತ್ತಿನಲ್ಲಿ ಒಂದು ಹೊಸ ಸಂಚಲನ ಮೂಡಿಸಿದ ವಿಷಯವೇ ಚಿಕಾಗೋ ಭಾಷಣ. ಮಾತೃತ್ವ ಭಾವ ಹೊಂದಿರುವ ದೇಶ ನಮ್ಮ ಭಾರತವೆಂಬ ವಿಚಾರವನ್ನು ತಿಳಿಸಿದವರು ಸ್ವಾಮಿ ವಿವೇಕಾನಂದರು. ತಮ್ಮ ಚಿಂತನೆ ಮೂಲಕ ಆಧ್ಯಾತ್ಮಿಕ ಸತ್ವವನ್ನು ಭಾರತದೆಲ್ಲೆಡೆ ಪಸರಿಸುವಂತೆ ಮಾಡಿದರು. ವಿದ್ಯಾರ್ಥಿಗಳು ಗುರುವಿನ ಮೂಲಕ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಎಂದು ರಾಮಕುಂಜದ ನಿವೃತ್ತ ಪ್ರಾಂಶುಪಾಲ ಗಣರಾಜ ಕುಂಬ್ಳೆ ಹೇಳಿದರು.

ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ, ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ, ವಿವೇಕಾನಂದ ಸಂಶೋಧನಾ ಕೇಂದ್ರ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ತೆಂಕಿಲ ನರೇಂದ್ರ ಪದವಿ-ಪೂರ್ವ ಕಾಲೇಜುನಲ್ಲಿ ಈಚೆಗೆ ನಡೆದ ವಿವೇಕ ಸ್ಮೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಅವರು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತೆಂಕಿಲ ನರೇಂದ್ರ ಪದವಿ-ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶಾನಭಾಗ್ ಮಾತನಾಡಿ, ವಿವೇಕಾನಂದರ ಜೀವನ ಶೈಲಿಯನ್ನು ವಿದ್ಯಾರ್ಥಿಗಳೆಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಈ ಮೂಲಕ ಭವಿಷ್ಯದಲ್ಲಿ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದರು.

ವೇದಿಕೆಯಲ್ಲಿ ವಿವೇಕಾನಂದ ಸಂಶೋಧನಾ ಕೇಂದ್ರದ ನಿರ್ದೇಶಕಿ ಡಾ.ವಿಜಯ ಸರಸ್ವತಿ ಬಿ, ತೆಂಕಿಲ ನರೇಂದ್ರ ಪದವಿ-ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕಿ ಸೌಮ್ಯ ಉಪಸ್ಥಿತರಿದ್ದರು.

ಭಾರತೀಯ ಸಂಸ್ಕೃತಿ ಮತ್ತು ಲಲಿತ ಕಲೆಗಳ ಅಧ್ಯಯನ ಕೇಂದ್ರದ ಸಂಯೋಜಕಿ ಡಾ.ವಿದ್ಯಾ ಎಸ್ ಸ್ವಾಗತಿಸಿದರು. ನರೇಂದ್ರ ಪದವಿ-ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಭವ್ಯಶ್ರೀ ವಂದಿಸಿದರು. ವಿವೇಕಾನಂದ ಸ್ನಾತಕೋತ್ತರ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕೌಸಲ್ಯ ನಿರೂಪಿಸಿದರು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.