ಧ್ಯಾನ್ ಚಂದ್ ದೇಶಪ್ರೇಮಿಯೂ ಹೌದು: ರವಿಶಂಕರ್
Puttur: ವಿವೇಕಾನಂದ ಕಾಲೇಜಿನ ಐಕ್ಯೂಎಸಿ ಘಟಕ, ಕ್ರೀಡಾ ಸಂಘ, ವಿದ್ಯಾರ್ಥಿ ಸಂಘ ಮತ್ತು ದೈಹಿಕ ಶಿಕ್ಷಣ ವಿಭಾಗದ ಸಹಯೋಗದಲ್ಲಿ 'ರಾಷ್ಟ್ರೀಯ ಕ್ರೀಡಾ ದಿನಾಚರಣೆ' ಆಚರಿಸಲಾಯಿತು.
ಪುತ್ತೂರು: ಧ್ಯಾನ್ ಚಂದ್ ಉತ್ತಮ ಕ್ರೀಡಾಪಟು ಮಾತ್ರವಲ್ಲದೆ, ದೇಶಪ್ರೇಮಿಯೂ ಹೌದು. ಅವರಂತೆ ಪ್ರತಿಯೊಬ್ಬರೂ ದೇಶ ಭಕ್ತಿ ಮೈಗೂಡಿಸಿಕೊಳ್ಳಬೇಕು ಎಂದು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ರವಿಶಂಕರ್ ವಿ.ಎಸ್ ಹೇಳಿದರು.
ಈಚೆಗೆ ಕಾಲೇಜಿನ ಐಕ್ಯೂಎಸಿ ಘಟಕ, ಕ್ರೀಡಾ ಸಂಘ, ವಿದ್ಯಾರ್ಥಿ ಸಂಘ ಮತ್ತು ದೈಹಿಕ ಶಿಕ್ಷಣ ವಿಭಾಗದ ಸಹಯೋಗದಲ್ಲಿ ಜರುಗಿದ 'ರಾಷ್ಟ್ರೀಯ ಕ್ರೀಡಾ ದಿನಾಚರಣೆ'ಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿಶ್ವದ ಹಾಕಿ ಒಲಿಂಪಿಕ್ಸ್‌ನಲ್ಲಿ ಪ್ರಪ್ರಥಮ ಬಾರಿಗೆ, ಭಾರತಕ್ಕೆ ಹ್ಯಾಟ್ರಿಕ್ ಚಿನ್ನದ ಪದಕವನ್ನು ಧ್ಯಾನ್ ಚಂದ್ ತಂದುಕೊಟ್ಟರು. ಹೀಗಾಗಿ, ಅವರ ಜನ್ಮದಿನವನ್ನು ಕ್ರೀಡಾ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ಮೂಲಕ ಧ್ಯಾನ್ ಚಂದ್'ರ ಸಾಧನೆಯನ್ನು ಸ್ಮರಿಸಲಾಗುತ್ತದೆ ಎಂದರು.
ಕಾಲೇಜಿನ ಪ್ರಾಂಶುಪಾಲ ಶ್ರೀಕೃಷ್ಣ ಗಣರಾಜ್ ಭಟ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ವೇದಿಕೆಯಲ್ಲಿ ಪರೀಕ್ಷಾಂಗ ಕುಲಸಚಿವ ಪ್ರಕಾಶ್ ಕುಮಾರ್, ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಣಮ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಆಡಳಿತ ಮಂಡಳಿಯ ವಿಶೇಷ ಅಧಿಕಾರಿ &ಕನ್ನಡ ವಿಭಾಗದ ಮುಖ್ಯಸ್ಥ ಡಾ.ಮನಮೋಹನ್ ಎಂ ನಿರ್ವಹಿಸಿದರು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.