ಪುತ್ತೂರು: ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ಇಬ್ಬರು ಉಪನ್ಯಾಸಕರಿಗೆ ಡಾಕ್ಟರೇಟ್ ಪದವಿ

Vivekananda Engineering College: ಪುತ್ತೂರಿನ ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ಇಬ್ಬರು ಸಹಾಯಕ ಪ್ರಾಧ್ಯಾಪಕರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದುಕೊಂಡಿದ್ದಾರೆ.

Oct 15, 2026 - 11:52
Oct 15, 2026 - 11:53
ಪುತ್ತೂರು: ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ಇಬ್ಬರು ಉಪನ್ಯಾಸಕರಿಗೆ ಡಾಕ್ಟರೇಟ್ ಪದವಿ

ಪುತ್ತೂರು: ಇಲ್ಲಿನ ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ಇಬ್ಬರು ಸಹಾಯಕ ಪ್ರಾಧ್ಯಾಪಕರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದುಕೊಂಡಿದ್ದಾರೆ.

ಪ್ರಮೋದ್ ಕುಮಾರ್ ಪಿ.ಎಂ ಅವರು 'ಅರೇಕಾ ಪ್ಲಾಂಟ್ ಡಿಸೀಸ್ ಐಡೆಂಟಿಫಿಕೇಶನ್ ಎಂಡ್ ಕ್ಲಾಸಿಫಿಕೇಶನ್ ಯೂಸಿಂಗ್ ಡೀಪ್ ಲರ್ನಿಂಗ್ ಟೆಕ್ನಿಕ್ಸ್' ಎನ್ನುವ ವಿಷಯದ ಬಗ್ಗೆ ತಿಪಟೂರಿನ ಕಲ್ಪತರು ಕಾಲೇಜಿನ ಡಾ.ರವಿಪ್ರಕಾಶ್ ಎಂ.ಎಲ್ ಮಾರ್ಗದರ್ಶನದಲ್ಲಿ ಮಂಡಿಸಿದ ಪ್ರಬಂಧಕ್ಕೆ ಪಿಎಚ್‌ಡಿ ಲಭಿಸಿದೆ. 

ಸದ್ಯ, ಪ್ರಮೋದ್ ಕುಮಾರ್, ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ 14 ವರ್ಷಗಳ ಬೋಧನಾನುಭವ ಹೊಂದಿದ್ದಾರೆ.

ಅಕ್ಷಯ ಡಿ ಶೆಟ್ಟಿ ಅವರು 'ಡಿಸೈನ್ ಎಂಡ್ ವ್ಯಾಲಿಡೇಶನ್ ಆಫ್ ಗ್ಯಾಲ್ವೇನಿಕ್ ಸ್ಕಿನ್ ರೆಸ್ಪೊನ್ಸ್ ಡಿವೈಸ್ ಫಾರ್ ಟ್ರೀಟ್‌ಮೆಂಟ್ ಆಫ್ ನ್ಯೂರೋಲಾಜಿಕಲ್ ಎಂಡ್ ಸೈಕಿಯಾಟ್ರಿಕ್ ಡಿಸಾರ್ಡರ್ಸ್' ಎಂಬ ವಿಷಯದ ಕುರಿತು ಎಸ್ಇಎ ಕಾಲೇಜಿನ ಪ್ರೊ.ಡಾ.ಉಷಾ ದೇಸಾಯಿ ಮತ್ತು ಸೆಂಟ್ರಲ್ ಯುನಿವರ್ಸಿಟಿ ಹರ್ಯಾಣದ ಪ್ರೊ.ಡಾ.ಆಕಾಶ್ ಸಕ್ಸೇನ ಮಾರ್ಗದರ್ಶನದಲ್ಲಿ ಪಿಎಚ್‌ಡಿ ಪದವಿ ಪಡೆದುಕೊಂಡಿದ್ದಾರೆ. 

ಪ್ರಸ್ತುತ, ಅಕ್ಷಯ ಶೆಟ್ಟಿ, ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ & ಮೆಶಿನ್ ಲರ್ನಿಂಗ್ ವಿಭಾಗದಲ್ಲಿ 9 ವರ್ಷಗಳಿಂದ ಸಹಾಯಕ ಪ್ರಾಧ್ಯಾಪಕಿಯಾಗಿ ಕೆಲಸ ಮಾಡುತ್ತಿದ್ದಾರೆ.

ಇವರುಗಳ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ ಎಂದು ಪ್ರಭಾರ ಪ್ರಾಂಶುಪಾಲ ಡಾ.ಎಸ್.ಕೆ.ಶ್ರೀಕಾಂತ್ ರಾವ್ ತಿಳಿಸಿದ್ದಾರೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.