Puttur: ವಿವೇಕಾನಂದ ಮಹಾವಿದ್ಯಾಲಯದಲ್ಲಿ 'ಎಥಿಕಲ್ ಹ್ಯಾಕಿಂಗ್' ವಿಶೇಷ ಕಾರ್ಯಗಾರ
Puttur: ವಿವೇಕಾನಂದ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ 'ಎಥಿಕಲ್ ಹ್ಯಾಕಿಂಗ್' ಪ್ರಾಯೋಗಿಕ ಕಾರ್ಯಗಾರದಲ್ಲಿ ಬೆಂಗಳೂರಿನ ರಿಇನ್‌ಪೋಸೆಕ್‌ನ ನಿರ್ದೇಶಕ ಮತ್ತು ಮುಖ್ಯ ತಂತ್ರಜ್ಞಾನ ಅಧಿಕಾರಿ ಸಮರ್ಥ್ ಭಾಸ್ಕರ್ ಭಟ್ ಮಾತನಾಡಿದರು.
ಪುತ್ತೂರು: ಇಂದಿನ ಕಾಲಘಟ್ಟದಲ್ಲಿ 'ಹ್ಯಾಕಿಂಗ್' ತಾಂತ್ರಿಕ ಅಭಿವೃದ್ಧಿಯ ಪ್ರತಿಬಿಂಬವಾಗಿದೆ. ಎಲ್ಲಾ ಕ್ಷೇತ್ರದಲ್ಲೂ ವಿಶೇಷ ಪರಿಣಿತಿ ಹೊಂದಲು ಇದರ ಅಗತ್ಯವಿದೆ. ವಿದ್ಯಾರ್ಥಿಗಳಿಗೆ ಕೌಶಲ್ಯ ಮುಖ್ಯವಾಗಿದ್ದು, ಸರಿಯಾದ ರೀತಿಯಲ್ಲಿ ಡಿಜಿಟಲ್ ಉತ್ಪನ್ನಗಳ ಬಳಕೆಯನ್ನು ಮಾಡುವುದರ ಮೂಲಕ ಕೌಶಲ್ಯಾಬಿವೃದ್ಧಿ ಸಾಧ್ಯ ಎಂದು ಬೆಂಗಳೂರಿನ ರಿಇನ್‌ಪೋಸೆಕ್‌ನ ನಿರ್ದೇಶಕ ಮತ್ತು ಮುಖ್ಯ ತಂತ್ರಜ್ಞಾನ ಅಧಿಕಾರಿ ಸಮರ್ಥ್ ಭಾಸ್ಕರ್ ಭಟ್ ಹೇಳಿದರು.
ವಿವೇಕಾನಂದ ಮಹಾವಿದ್ಯಾಲಯದ ಗಣಕಶಾಸ್ತ್ರ ವಿಭಾಗ ಹಾಗೂ ಐಕ್ಯೂಎಸಿ ಘಟಕ ಸಹಯೋಗದಲ್ಲಿ ಏರ್ಪಡಿಸಿದ್ದ 'ಎಥಿಕಲ್ ಹ್ಯಾಕಿಂಗ್' ಪ್ರಾಯೋಗಿಕ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಅವರು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ.ಶ್ರೀಕೃಷ್ಣ ಗಣರಾಜ ಭಟ್ ಮಾತನಾಡಿ, ಶಿಕ್ಷಣ, ಆರೋಗ್ಯ ಹಾಗೂ ಆಡಳಿತದವರೆಗೆ ಡಿಜಿಟಲ್ ಸೇವೆಯು ವಿಸ್ತಾರಗೊಂಡಿದೆ. ಇದು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ತಂತ್ರಜ್ಞಾನ ಮುಂದುವರಿದಂತೆ, ಸೈಬರ್ ಅಪರಾಧಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತಿವೆ. ನಮ್ಮ ವೈಯಕ್ತಿಕ ಮಾಹಿತಿಗಳನ್ನು ಸುರಕ್ಷಿತವಾಗಿ ಇಟ್ಟುಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿವಾಗಿದೆ ಎಂದರು.
ವೇದಿಕೆಯಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಹಿರಿಯ ಸೈಬರ್ ಸೆಕ್ಯುರಿಟಿ ಸಹಾಯಕ ಹಾಗೂ ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿ ಕೌಶಿಕ್ ಜಿ.ಎನ್ ಉಪಸ್ಥಿತರಿದ್ದರು.
ಸಭಾಕಾರ್ಯಕ್ರಮದ ಬಳಿಕ, ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕಾರ್ಯಗಾರ ನಡೆಯಿತು. ಗಣಕಶಾಸ್ತ್ರ ವಿಭಾಗದ ಮುಖ್ಯಸ್ಥ & ಪರೀಕ್ಷಾಂಗ ಕುಲಸಚಿವ ಪ್ರಕಾಶ್ ಕುಮಾರ್ ಪಿ ಸ್ವಾಗತಿಸಿದರು. ಗಣಕಶಾಸ್ತ್ರ ವಿಭಾಗದ ಉಪನ್ಯಾಸಕಿ ಅನುರಾಧ ವಂದಿಸಿದರು. ದ್ವಿತೀಯ ಬಿಸಿಎ ವಿಭಾಗದ ವಿದ್ಯಾರ್ಥಿನಿ ತನ್ಮಯಿ ನಿರೂಪಿಸಿದರು.