Vivekananda PU College: ವಾಣಿಜ್ಯ & ವೃತ್ತಿಪರ ಕೋರ್ಸ್‌ಗಳ ಮಾಹಿತಿ ಕಾರ್ಯಾಗಾರ

Vivekananda PU College: ಇಲ್ಲಿನ ವೈದೇಹಿ ಸಭಾಂಗಣದಲ್ಲಿ ಈಚೆಗೆ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ, ಉದ್ಯೋಗಾವಕಾಶಗಳು ಮತ್ತು ವೃತ್ತಿಪರ ಕೋರ್ಸ್‌ಗಳ ಬಗ್ಗೆ ವಿಶೇಷ ಮಾಹಿತಿ ಕಾರ್ಯಾಗಾರ ಆಯೋಜಿಸಲಾಗಿತ್ತು.

Jul 24, 2026 - 17:05
Vivekananda PU College: ವಾಣಿಜ್ಯ & ವೃತ್ತಿಪರ ಕೋರ್ಸ್‌ಗಳ ಮಾಹಿತಿ ಕಾರ್ಯಾಗಾರ

ಪುತ್ತೂರು: ವಿವೇಕಾನಂದ ಪಿಯು ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಈಚೆಗೆ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ, ಉದ್ಯೋಗಾವಕಾಶಗಳು ಮತ್ತು ವೃತ್ತಿಪರ ಕೋರ್ಸ್‌ಗಳ ಬಗ್ಗೆ ವಿಶೇಷ ಮಾಹಿತಿ ಕಾರ್ಯಾಗಾರ ಆಯೋಜಿಸಲಾಗಿತ್ತು.

ಸದ್ಯ ವಾಣಿಜ್ಯ ಕ್ಷೇತ್ರದಲ್ಲಿ ವಿಪುಲ ಉದ್ಯೋಗವಕಾಶಗಳಿವೆ. ವಿದ್ಯಾರ್ಥಿಗಳು ಸಿಎ ಹಾಗೂ ಸಿಎಸ್‌ನಂತಹ ಉನ್ನತ ವೃತ್ತಿಪರ ಕೋರ್ಸ್‌ಗಳನ್ನು ಆಯ್ದುಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬಹುದು ಎಂದು ವಾಣಿಜ್ಯ ವಿಭಾಗದ ಉಪನ್ಯಾಸಕಿ ಉಷಾ ಎ.ಎಂ ಸಲಹೆ ನೀಡಿದರು.

ಇಂದಿನ ಆಧುನಿಕ ಯುಗದಲ್ಲಿ ಕೌಶಲ್ಯಾಭಿವೃದ್ಧಿಯ ಅಗತ್ಯತೆ ಹಾಗೂ ಸಾಫ್ಟ್‌ವೇರ್ ಜ್ಞಾನ, ಷೇರು ಮಾರುಕಟ್ಟೆ ಹಾಗೂ ಮ್ಯೂಚ್‌ವಲ್ ಫಂಡ್ ಹಾಗೂ ಟ್ಯಾಲಿ-ಸರ್ಟಿಫಿಕೇಟ್ ಕೋರ್ಸ್‌ಗಳ ಬಗ್ಗೆ ವಾಣಿಜ್ಯ ವಿಭಾಗದ ಉಪನ್ಯಾಸಕಿ ಗ್ರೀಷ್ಮ ಕೆ.ಎಸ್ ಸವಿಸ್ತಾರವಾಗಿ ವಿವರಿಸಿದರು.

ಈ ಕಾರ್ಯಕ್ರಮದಲ್ಲಿ ಉಪನ್ಯಾಸಕರು ಉಪಸ್ಥಿತರಿದ್ದು, ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಂಡರು.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.