ಭಾರತೀಯ ಪರಿಕಲ್ಪನೆಗೆ ಒತ್ತು ನೀಡೋಣ: ಕೃಷ್ಣಕುಮಾರ್ ಶೆಟ್ಟಿ ಕಡಬ

Puttur: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ 80ನೇ 'ಸ್ವಾತಂತ್ರ್ಯ ದಿನಾಚರಣೆ'ಯಲ್ಲಿ ಆಚಾರಿಸಲಾಯಿತು.

Aug 16, 2026 - 14:09
Aug 16, 2026 - 14:09
ಭಾರತೀಯ ಪರಿಕಲ್ಪನೆಗೆ ಒತ್ತು ನೀಡೋಣ: ಕೃಷ್ಣಕುಮಾರ್ ಶೆಟ್ಟಿ ಕಡಬ

ಪುತ್ತೂರು: ಅನೇಕ ಕ್ರಾಂತಿಕಾರಿಗಳ ತ್ಯಾಗ, ಯುವಜನರ ಬಲಿದಾನ, ರಕ್ತದ ಅರ್ಪಣೆಯ ಪ್ರತಿರೂಪ ಸ್ವತಂತ್ರ್ಯ ಭಾರತ. ಸ್ವಾತಂತ್ರ್ಯ ದೊರೆತು 80 ವರ್ಷ ಕಳೆದರೂ, ದೇಶದಲ್ಲಿ ಬ್ರಿಟಿಷರ ಸಿದ್ಧಾಂತ ಇಂದಿಗೂ ನಮ್ಮ ಆಡಳಿತ ಹಾಗೂ ಶೈಕ್ಷಣಿಕ ವ್ಯವಸ್ಥೆಯನ್ನು ಆವರಿಸಿಕೊಂಡಿದೆ. ಆದರೆ ಈ ಮನಸ್ಥಿತಿಯಿಂದ ಹೊರಬಂದು 'ಭಾರತೀಯ ಪರಿಕಲ್ಪನೆ'ಗೆ ಹೆಚ್ಚು ನೀಡಬೇಕು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ಶೆಟ್ಟಿ ಕಡಬ ಹೇಳಿದರು.
 
ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ನಡೆದ  80ನೇ 'ಸ್ವಾತಂತ್ರ್ಯ ದಿನಾಚರಣೆ'ಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
 
ಭಾರತ ಇಂದು ತಾಂತ್ರಿಕ, ಆರ್ಥಿಕ, ಸಾಮಾಜಿಕ, ಉದ್ಯಮ ಕ್ಷೇತ್ರ ಹಾಗೂ ಸಮಗ್ರ ಶಿಕ್ಷಣದ ಮೂಲಕ ಸಾಗುತ್ತಿದೆ. ಹಾಗಾಗಿ, ನಾವು ವಿಕಸಿತ ಕಲ್ಪನೆಗೆ ಹೆಚ್ಚು ಒತ್ತು ನೀಡುವುದರೊಂದಿಗೆ, ಭಾರತವನ್ನು ಮುಂದುವರೆದ ದೇಶವನ್ನಾಗಿ ಮಾಡಬೇಕು. ಈ ನಿಟ್ಟಿನಲ್ಲಿ ಯುವ ಜನರು ಕೌಶಲ್ಯ ಅಭಿವೃದ್ಧಿ, ಉದ್ಯೋಗ, ವ್ಯಕ್ತಿತ್ವ ನಿರ್ಮಾಣದ ಮೂಲಕ ಸ್ವಸ್ಥ ಪರಿಸರವನ್ನು ನಿರ್ಮಿಸುವಲ್ಲಿ ಸಂಸ್ಥೆಯು ವಿವಿಧ ಮಜಲುಗಳಲ್ಲಿ ದೇಶಕ್ಕೆ ಕೊಡುಗೆನ್ನು ನೀಡುತ್ತಿದೆ ಎಂದರು.
 
ಈ ವೇಳೆ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳ ಪ್ರಾಯೋಗಿಕ ಪತ್ರಿಕೆ 'ವಿಕಸನ'ದ ಸ್ವಾತಂತ್ರ್ಯ ದಿನಾಚರಣೆಯ ವಿಶೇಷ ಸಂಚಿಕೆ ಬಿಡುಗಡೆ ಮಾಡಲಾಯಿತು.
 
ವಿವೇಕಾನಂದ ವಿದ್ಯಾವರ್ಧಕ ಸಂಘದ ಅಂಗ ಸಂಸ್ಥೆಗಳಾದ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ವಿವೇಕಾನಂದ ಪದವಿಪೂರ್ವ ಕಾಲೇಜು, ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು, ವಿವೇಕಾನಂದ ತಾಂತ್ರಿಕ ವಿದ್ಯಾಲಯ, ವಿವೇಕಾನಂದ ಇನ್ ಸ್ಟಿಟ್ಯೂಟ್ ಆಫ್ ಫಾರ್ಮಸ್ಯುಟಿಕಲ್ ಸೈನ್ಸ್, ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನ ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು, ಶಿಕ್ಷಕ - ಶಿಕ್ಷಕೇತರ ವೃಂದ, ವಿದ್ಯಾರ್ಥಿಗಳು, ಎನ್‌ಸಿಸಿ, ಎನ್ಎಸ್.ಎಸ್, ರೋವರ್ಸ್, ರೆಂಜಾರ್ಸ್, ರೆಡ್ ಕ್ರಾಸ್, ಘೋಷ್ ಘಟಕದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
 
ವಿವೇಕಾನಂದ ಪದವಿಪೂರ್ವ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ಹರ್ಷಿತಾ ಪಿ ಕಾರ್ಯಕ್ರಮವನ್ನು ನಿರ್ವಹಿಸಿದರು.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.