Puttur: ಪುತ್ತೂರು ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಕೆ. ಗೆಲುವು
Puttur: ಮುಂದಿನ ಎರಡು ವರ್ಷಗಳ ಅವಧಿಗೆ ಪುತ್ತೂರು ವಕೀಲರ ಸಂಘದ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಕೆ ಅವರು ಅಧಿಕಾರ ನಡೆಸಲಿದ್ದಾರೆ.
ಪುತ್ತೂರು: ಇಲ್ಲಿನ ವಕೀಲರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಕೆ ಅವರು ಗೆಲುವು ಸಾಧಿಸಿದ್ದಾರೆ.
ಮುಂದಿನ ಎರಡು ವರ್ಷಗಳ ಅವಧಿಗೆ (2026-27 ರಿಂದ 2027-28), ಇಂದು (ಗುರುವಾರ) ಬೆಳಗ್ಗೆ ಚುನಾವಣೆ ನಡೆಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಸಂತೋಷ್ ಕುಮಾರ್ ಕೆ ಸ್ಪರ್ಧಿಸಿದ್ದು, ಅವರು ಅಮೋಘವಾಗಿ ಜಯ ಸಾಧಿಸಿದ್ದಾರೆ. ಮುಂದಿನ 2 ವರ್ಷ ಅಧ್ಯಕ್ಷರಾಗಿ ಕಾರ್ಯ ನಿರ್ವಹಣೆ ಮಾಡಲಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಮಹಾಬಲ ಶೆಟ್ಟಿ ಕೊಮ್ಮಂಡ, ಕಾರ್ಯದರ್ಶಿ ಸ್ಥಾನಕ್ಕೆ ಸ್ವಾತಿ ಜಗನ್ನಾಥ ರೈ ಮತ್ತು ಉದಯಚಂದ್ರ ಕರಂಬಾರು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಗಳಾಗಿ ಎಸ್.ಪ್ರವೀಣ್ ಕುಮಾರ್, ಜಯಾನಂದ ಕೆ ಹಾಗೂ ಮನೋಹರ್ ಎ ಅವರು ಕರ್ತವ್ಯ ನಿರ್ವಹಿಸಿದ್ದರು.