ನರಿಮೊಗರು ಮರಾಠಿ ಸಮಾಜ ಸೇವಾ ಸಂಘ: ಜು.26ರಂದು ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆ, ವಾರ್ಷಿಕ ಸಭೆ

Puttur: ನರಿಮೊಗರು ಮರಾಠಿ ಸಮಾಜ ಸೇವಾ ಸಂಘದಿಂದ ಜು.26ರಂದು ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಾರ್ಷಿಕ ಸಭೆ ನಡೆಯಲಿದೆ.

Jul 25, 2026 - 14:04
Jul 25, 2026 - 14:17
ನರಿಮೊಗರು ಮರಾಠಿ ಸಮಾಜ ಸೇವಾ ಸಂಘ: ಜು.26ರಂದು ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆ, ವಾರ್ಷಿಕ ಸಭೆ

ಪುತ್ತೂರು: ನರಿಮೊಗರು, ಮುಂಡೂರು, ಶಾಂತಿಗೋಡು ಗ್ರಾಮೀಣ ಪ್ರದೇಶದ ವ್ಯಾಪ್ತಿಯನ್ನು ಒಳಗೊಂಡಿರುವ ನರಿಮೊಗರು ಮರಾಠಿ ಸಮಾಜ (Narimogaru marati Samaja) ಸೇವಾ ಸಂಘದಿಂದ ಜು.26 ರಂದು ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಾರ್ಷಿಕ ಮಹಾಸಭೆ ನಡೆಯಲಿದೆ.

ಸಂಘದ ಸಮಾಜ ಮಂದಿರದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ನರಿಮೊಗರು ಮರಾಠಿ ಸಮಾಜ ಸೇವಾ ಸಂಘದ ಅಧ್ಯಕ್ಷ ಮಹಾಲಿಂಗ ನಾಯ್ಕ ನರಿಮೊಗರು ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕೊಂಬೆಟ್ಟು ಮರಾಠಿ ಸಮಾಜ ಸೇವಾ ಸಂಘದ ಅಧ್ಯಕ್ಷ ಕರುಣಾಕರ ಟಿ. ಪಾಂಗ್ಲಾಯಿ, ನಿವೃತ್ತ ಉಪ ನೋಂದಾಣಾಧಿಕಾರಿ ಹರಿಯಪ್ಪ ನಾಯ್ಕ ನೈತಾಡಿ, ಅಮ್ಮುಂಜ ಪಾಲಿಂಜೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ರಾಮಣ್ಣ ನಾಯ್ಕ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಸಮುದಾಯದ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿ ಕೃಷ್ಣ ನಾಯ್ಕ ಎನ್‌. ಸಂಪ್ಯ, ಕೋಶಾಧಿಕಾರಿ ಈಶ್ವರ ನಾಯ್ಕ ಅಜಲಾಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.