ಬೆಂಗಳೂರು ನಗರದ ನೂತನ ಮುಖ್ಯ ಪೊಲೀಸ್ ಆಯುಕ್ತರಾಗಿ ಆರ್.ಹಿತೇಂದ್ರ ನೇಮಕ
R.Hitendra: ಬೆಂಗಳೂರು ನಗರದ ನೂತನ ಮುಖ್ಯ ಪೊಲೀಸ್ ಆಯುಕ್ತರಾಗಿ ಆರ್.ಹಿತೇಂದ್ರ ಅವರನ್ನು ನೇಮಕ ಮಾಡಲಾಗಿದೆ.
ಬೆಂಗಳೂರು: ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದೆ. ಬೆಂಗಳೂರು ನಗರದ ನೂತನ ಮುಖ್ಯ ಪೊಲೀಸ್ ಆಯುಕ್ತರಾಗಿ ಆರ್.ಹಿತೇಂದ್ರ ಅವರನ್ನು ನೇಮಕ ಮಾಡಲಾಗಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಸೀಮಂತ್ ಕುಮಾರ್ ಸಿಂಗ್ ಅವರನ್ನು ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಎಡಿಜಿಪಿಯಾಗಿ ವರ್ಗಾಯಿಸಲಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ರಚನೆಯಾದ ಹಿನ್ನೆಲೆ, ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಐದು ಹೊಸ ಕಮಿಷನರೇಟ್‌ಗಳ ರಚನೆಗೆ ಅ.6 ರಂದು ಕ್ಯಾಬಿನೆಟ್ ಸಭೆಯಲ್ಲಯೂ ಒಪ್ಪಿಗೆ ಸೂಚಿಸಲಾಗಿತ್ತು. ಸದ್ಯ ಪ್ರತಿ ಕಮಿಷನರೇಟ್‌ಗಳಿಗೂ ಪೊಲೀಸ್ ಆಯುಕ್ತರನ್ನು ನೇಮಿಸಲಾಗಿದ್ದು, ಹಿತೇಂದ್ರ ಅವರು ಮುಖ್ಯ ಆಯುಕ್ತರಾಗಿ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ.
ಪೊಲೀಸ್ ಕಂಪ್ಯೂಟರ್ ವಿಂಗ್‌ನ ಐಜಿಪಿಯಾಗದ್ದ ಲಾಭು ರಾಮ್ ಅವರನ್ನು ಕೇಂದ್ರ ವಿಭಾಗದ ಆಯುಕ್ತರಾಗಿ ನಿಯೋಜಿಸಲಾಗಿದೆ. ಬಳ್ಳಾರಿ ವಲಯದ ಐಜಿಪಿ ಪಿ.ಎಸ್.ಹರ್ಷ ಅವರನ್ನು ಪೂರ್ವ ವಿಭಾಗದ ಆಯುಕ್ತರಾಗಿ ನೇಮಕ ಮಾಡಲಾಗಿದೆ.
ಆಂತರಿಕ ಭದ್ರತಾ ವಿಭಾಗದ ಐಜಿಪಿ ವಿಕಾಶ್ ಕುಮಾರ್ ವಿಕಾಶ್ ಅವರನ್ನು ಪಶ್ಚಿಮ ವಿಭಾಗದ ಆಯುಕ್ತರಾಗಿ ನಿಯೋಜಿಸಲಾಗಿದೆ. ದಕ್ಷಿಣ ವಲಯದ ಐಜಿಪಿ ಎಂ.ಬಿ.ಬೋರಲಿಂಗಯ್ಯ ಅವರನ್ನು ಉತ್ತರ ವಿಭಾಗದ ಪೊಲೀಸ್ ಆಯುಕ್ತರಾಗಿ ನೇಮಿಸಲಾಗಿದೆ.
ಸಿ.ವಂಶಿ ಕೃಷ್ಣ ಅವರನ್ನು ದಕ್ಷಿಣ ವಿಭಾಗದ ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿದೆ.
ಹೇಮಂತ್ ಎಂ ನಿಂಬಾಳ್ಕರ್ ಅವರನ್ನು ಬೆಂಗಳೂರು ನಗರ ಸಂಚಾರ ವಿಭಾಗದ ಪೊಲೀಸ್ ಆಯುಕ್ತರಾಗಿ ನಿಯೋಜಿಸಲಾಗಿದೆ. ಹೆಚ್ಚುವರಿಯಾಗಿ ರೌಡಿ ನಿಗ್ರಹ ದಳದ ಆಯುಕ್ತರಾಗಿಯೂ ಕಾರ್ಯನಿರ್ವಹಿಸಲಿದ್ದಾರೆ.