ರೈಲ್ವೆಯಲ್ಲಿ 60,000 ಹುದ್ದೆಗಳ ನೇಮಕಾತಿ; ಕನ್ನಡದಲ್ಲೂ ಪರೀಕ್ಷೆ ಬರೆಯಲು ಅವಕಾಶ: ಸಚಿವ ವಿ.ಸೋಮಣ್ಣ
ರಾಷ್ಟ್ರೀಯ ರೋಜಗಾರ್ ಯೋಜನೆಯನ್ನು ಜಾರಿಗೆ ತಂದಿದ್ದು, 2014 ರಿಂದ 12 ಆವೃತ್ತಿಯಲ್ಲಿ ಉದ್ಯೋಗ ಮೇಳವನ್ನು ಮಾಡಿ ಇಲ್ಲಿಯವರೆಗೆ 14 ಲಕ್ಷಕ್ಕೂ(Railway jobs) ಹೆಚ್ಚು ಜನರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಲಾಗಿದೆ. ಈ ಯೋಜನೆಯಡಿ ಪ್ರತಿಭಾವಂತರಿಗೆ ಉದೋಗಗಳನ್ನು ನೀಡಲಾಗುತ್ತಿದೆ. ರೈಲ್ವೆ ಇಲಾಖೆಯಲ್ಲಿ 2014 ರಿಂದ ಇಲ್ಲಿಯವರೆಗೆ ಮಿಶನ್ ಮೋಡ್ ನಲ್ಲಿ 5.2 ಲಕ್ಷ ಉದ್ಯೋಗಳನ್ನು ನೀಡಲಾಗಿದೆ.
ಬೆಂಗಳೂರು: ಭಾರತೀಯ ರೈಲ್ವೆ ಇಲಾಖೆಯು ಈ ವರ್ಷದಲ್ಲಿ ಒಟ್ಟು 60 ಸಾವಿರ ವಿವಿಧ ಹಂತದ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಅರ್ಹ ಅಭ್ಯರ್ಥಿಗಳು ಕನ್ನಡದಲ್ಲೂ ಪರೀಕ್ಷೆ ಬರೆಯಬಹುದೆಂದು (Indian Railways) ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ((V Somanna) ತಿಳಿಸಿದ್ದಾರೆ.
ಸರ್ಕಾರಿ ಉದ್ಯೋಗಗಳಲ್ಲಿ ಆಯ್ಕೆಯಾದ 51000ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ರೋಜಗಾರ್ ಯೋಜನೆಯನ್ನು ಜಾರಿಗೆ ತಂದಿದ್ದು, 2014 ರಿಂದ 12 ಆವೃತ್ತಿಯಲ್ಲಿ ಉದ್ಯೋಗ ಮೇಳವನ್ನು ಮಾಡಿ ಇಲ್ಲಿಯವರೆಗೆ 14 ಲಕ್ಷಕ್ಕೂ(Railway jobs) ಹೆಚ್ಚು ಜನರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಲಾಗಿದೆ. ಈ ಯೋಜನೆಯಡಿ ಪ್ರತಿಭಾವಂತರಿಗೆ ಉದೋಗಗಳನ್ನು ನೀಡಲಾಗುತ್ತಿದೆ. ರೈಲ್ವೆ ಇಲಾಖೆಯಲ್ಲಿ 2014 ರಿಂದ ಇಲ್ಲಿಯವರೆಗೆ ಮಿಶನ್ ಮೋಡ್ ನಲ್ಲಿ 5.2 ಲಕ್ಷ ಉದ್ಯೋಗಳನ್ನು ನೀಡಲಾಗಿದೆ ಎಂದರು.
ಅಂಚೆ ಇಲಾಖೆಯಲ್ಲಿ ಹೆಚ್ಚಿನ ನೇಮಕಾತಿಗಳು ನಡೆಯುತ್ತಿವೆ. ಭಾರತದಲ್ಲಿ ಕರ್ನಾಟಕ ಸಾಂಸ್ಕೃತಿಕ ರಾಜ್ಯ, ಕರ್ನಾಟಕದಲ್ಲಿ ಮೈಸೂರು ಸಾಂಸ್ಕೃತಿಕ ರಾಜಧಾನಿ. ಪ್ರಧಾನ ಮಂತ್ರಿ ಜನ ಧನ್ ಯೋಜನೆಯಡಿ ಸೌಲಭ್ಯ, ಆರೋಗ್ಯ ಸೌಲಭ್ಯ ಹೆಚ್ಚಿಸಲು ಆಯುಷ್ಮಾನ್ ಭಾರತ್ ಯೋಜನೆ, (modi government) ಮುದ್ರಾ ಯೋಜನೆ, ಬೇಟಿ ಬಚಾವೋ ಬೇಟಿ ಪಢಾವೋ ಯೋಜನೆ ಮುಂತಾದ ಯೋಜನೆಗಳನ್ನು ಜಾರಿಗೆ ನರೇಂದ್ರ ಮೋದಿಯವರ ಸರ್ಕಾರ ಜಾರಿಗೆ ತಂದು ಅಭಿವೃದ್ಧಿ ಮಾಡಿದೆ ಎಂದರು.
ವಾಕ್ ಮತ್ತು ಶ್ರವಣ ಸಂಸ್ಥೆಗೆ 150 ಕೋಟಿ ಅನುದಾನ ನೀಡಿ, ಇದರ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕೊಡುಗೆ ನೀಡಿದೆ ಎಂದರು.
ದೇಶಕ್ಕೆ ತನ್ನದೇ ಅದ ಪರಂಪರೆ, ಇತಿಹಾಸ ಇದೆ. ಪ್ರತಿಯೊಬ್ಬರೂ ದೇಶ ಪ್ರೇಮವನ್ನು ಬೆಳೆಸಿಕೊಳ್ಳಿ. ಉದ್ಯೋಗ ಪಡೆದ 51 ಸಾವಿರ ಅಭ್ಯರ್ಥಿಗಳಿಗೆ ಶುಭವಾಗಲಿ. ಮೈಸೂರು ವಿಭಾಗದಲ್ಲಿ 171 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.