ರಾಮಕುಂಜ: ಎನ್‌ಡಿಆರ್‌ಎಫ್‌ನಿಂದ ವಿಪತ್ತು ನಿರ್ವಹಣಾ ಕಾರ್ಯಕ್ರಮ
Ramakunja: ಶ್ರೀರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ವತಿಯಿಂದ 'ವಿಪತ್ತು ನಿರ್ವಹಣೆ'ಯ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.
ರಾಮಕುಂಜ: ಶ್ರೀರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ವತಿಯಿಂದ 'ವಿಪತ್ತು ನಿರ್ವಹಣೆ'ಯ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.
ಎನ್‌ಡಿಆರ್‌ಎಫ್‌ನ ಇನ್ಸ್‌ಪೆಕ್ಟರ್ ಶಾಂತಿಲಾಲ್ ಜಟಿಯ, ಹೆಡ್ ಕಾನ್‌ಸ್ಟೆಬಲ್‌ಗಳಾದ ಉಮಾಪತಿ ,ನಿವೇಶ್ ಮತ್ತು ಕಾನ್‌ಸ್ಟೆಬಲ್‌ಗಳಾದ ರಾಗೇರಾಮ್ ಕೃಷ್ಣ, ಟಿ.ಸೆಲ್ವ ಕುಮಾರ್ ಅವರು ಭಾಗವಹಿಸಿದ್ದರು.
ವಿವಿಧ ರೀತಿಯ ವಿಪತ್ತುಗಳ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ವಿಪತ್ತು ನಿರ್ವಹಣೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಶಾಲೆಯ ಮುಖ್ಯ ಶಿಕ್ಷಕ ಶ್ರೀವೆಂಕಟೇಶ ದಾಮ್ಲೆ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ರುದ್ರನಾಯಕ್ ನಿರೂಪಿಸಿದರು. ಈ ವೇಳೆ ಇನ್ಸ್‌ಪೆಕ್ಟರ್ ಶಾಂತಿಲಾಲ್ ಜಟಿಯ ಅವರಿಗೆ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು.
ನಿಶ್ಚಿತಾ ನಿರೂಪಿಸಿ, ವಂದಿಸಿದರು. ಶಾಲೆಯ ಶಿಕ್ಷಕ ವೃಂದ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಇದ್ದರು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.