ರಾಮಕುಂಜ: ಇಂದು ಧನ್ಯೋಸ್ಮಿ ಕೃತಜ್ಞತಾ ಸಮರ್ಪಣೆ & ಗ್ರಂಥಾಲಯ ಉದ್ಘಾಟನೆ

Ramakunja: ಶ್ರೀರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಇಂದು (ಜುಲೈ 26) ಬೆಳಗ್ಗೆ 10 ಗಂಟೆಗೆ, ಜೀವನದ ಬೆಳವಣಿಗೆಯಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದ ಅರ್ಪಿಸಲು ಧನ್ಯೋಸ್ಮಿ ಕೃತಜ್ಞತಾ ಸಮರ್ಪಣೆ ಹಾಗೂ ಗ್ರಂಥಾಲಯ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿದೆ.

Jul 26, 2026 - 07:06
Jul 26, 2026 - 07:19
ರಾಮಕುಂಜ: ಇಂದು ಧನ್ಯೋಸ್ಮಿ ಕೃತಜ್ಞತಾ ಸಮರ್ಪಣೆ & ಗ್ರಂಥಾಲಯ ಉದ್ಘಾಟನೆ

ರಾಮಕುಂಜ: ಶ್ರೀರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಇಂದು (ಜುಲೈ 26) ಬೆಳಗ್ಗೆ 10 ಗಂಟೆಗೆ, ಜೀವನದ ಬೆಳವಣಿಗೆಯಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದ ಅರ್ಪಿಸಲು ಧನ್ಯೋಸ್ಮಿ ಕೃತಜ್ಞತಾ ಸಮರ್ಪಣೆ ಹಾಗೂ ಗ್ರಂಥಾಲಯ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿದೆ. 

ಶ್ರೀರಾಮಕುಂಜೇಶ್ವರ ಹಿರಿಯ ಪ್ರಾಥಮಿಕ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಸತೀಶ್ ಭಟ್ ಬಿಳಿನೆಲೆ ನೇತೃತ್ವದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. 'ಹಾರ ತುರಾಯಿಗಿಂತ ಪುಸ್ತಕವನ್ನೇ ಅಮೂಲ್ಯ ಉಡುಗೊರೆ ಎಂದು ಪರಿಗಣಿಸಿ' ಎಂಬ ಘೋಷವಾಕ್ಯದೊಂದಿಗೆ ಈ ಸಮಾರಂಭವು ಜ್ಞಾನ ಹಾಗೂ ಕೃತಜ್ಞತೆಯ ಸಂಗಮವಾಗಿ ಮೂಡಿಬರಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕಾರ್ಯದರ್ಶಿ ಕೆ.ಎಸ್.ರಾಧಾಕೃಷ್ಣ ವಹಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಶಿಧರ ಜಿ.ಎಸ್ ನೂತನ ಗ್ರಂಥಾಲಯವನ್ನು ಲೋಕಾರ್ಪಣೆಗೊಳಿಸಲಿದ್ದಾರೆ.

ಜೆಸಿಐ ರಾಷ್ಟ್ರೀಯ ತರಬೇತುದಾರ ಕೆ.ರಾಜೇಂದ್ರ ಭಟ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಇದೇ ವೇಳೆ 'ಗುರುತ್ವಾಕರ್ಷಣ' ಅಭಿನಂದನಾ ಹೊತ್ತಗೆಯನ್ನು ಪುತ್ತೂರು ವಿಸ್ತಾರಿತ ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣುಪ್ರಸಾದ್ ಬಿಡುಗಡೆಗೊಳಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಪುತ್ತೂರಿನ ಎಸ್ಆರ್‌ಕೆ ಲಾಡರ್ಸ್'ನ ಕೇಶವ ಅಮ್ಮೈ ಭಾಗವಹಿಸಲಿದ್ದಾರೆ. ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ವಸತಿ ಶಾಲೆಯ ಕಾರ್ಯದರ್ಶಿ ಶೇಷಪ್ಪ ರೈ, ವಿದ್ಯಾವರ್ಧಕ ಸಭಾದ ಸಂಚಾಲಕ ನಾರಾಯಣ ಭಟ್, ಶ್ರೀರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ ಕೆ ಮತ್ತು ಬೆಂಗಳೂರಿನ ಸಿಸ್ಕೊ ಸಂಸ್ಥೆಯ ಮ್ಯಾನೇಜರ್ ಭಾಸ್ಕರ್ ಉಪಸ್ಥಿತರಿರಲಿದ್ದಾರೆ.

ಕಾರ್ಯಕ್ರಮದ ಬಳಿಕ, ಮಧ್ಯಾಹ್ನ 1 ಗಂಟೆಯಿಂದ ಸಹಮಿಲನ ಮತ್ತು ಸಹಭೋಜನ ಕಾರ್ಯಕ್ರಮ ನಡೆಯಲಿದೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.