Ramayana: ರಾಮಾಯಣ ಸೂಪರ್ ಹಿಟ್.. ರೂ.1,500 ಕೋಟಿ ಕ್ಲಬ್ ಸನಿಹದಲ್ಲಿ!

Ramayana: ರಾಕಿಂಗ್ ಸ್ಟಾರ್ ಯಶ್ ನಟನೆಯ ಪ್ಯಾನ್-ಇಂಡಿಯಾ ಸಿನಿಮಾ 'ರಾಮಾಯಣ'ವನ್ನು ಪ್ರೇಕ್ಷಕರು ಮೆಚ್ಚಿದ್ದಾರೆ.

Nov 18, 2026 - 21:32
Nov 18, 2026 - 21:32
Ramayana: ರಾಮಾಯಣ ಸೂಪರ್ ಹಿಟ್.. ರೂ.1,500 ಕೋಟಿ ಕ್ಲಬ್ ಸನಿಹದಲ್ಲಿ!

Ramayana: ರಾಕಿಂಗ್ ಸ್ಟಾರ್ ಯಶ್ ನಟನೆಯ ಪ್ಯಾನ್-ಇಂಡಿಯಾ ಸಿನಿಮಾ 'ರಾಮಾಯಣ'ವನ್ನು ಪ್ರೇಕ್ಷಕರು ಮೆಚ್ಚಿದ್ದು, ಸೂಪರ್ ಹಿಟ್ ಆಗಿದೆ. ಬಾಕ್ಸ್ ಆಫೀಸ್‌ನಲ್ಲಿಯೂ ಅಬ್ಬರಿಸುತ್ತಿದೆ.  

ಸ್ಯಾಕ್ನಿಲ್ಕ್ ಪ್ರಕಾರ, 13 ದಿನವಾದ ಮಂಗಳವಾರದಂದು ಭಾರತದಲ್ಲಿ 22,551 ಶೋಗಳು ಯಶಸ್ವಿಯಾಗಿ ಪ್ರದರ್ಶನಗೊಂಡಿವೆ. ರೂ.28.35 ಕೋಟಿ ನೆಟ್ ಗಳಿಕೆಯಾಗಿದೆ. ಇದರೊಂದಿಗೆ ವಿಶ್ವಾದ್ಯಂತದ ಒಟ್ಟು ರೂ.1,483.10 ಕೋಟಿ ಗ್ರಾಸ್ ಕಲೆಕ್ಷನ್ ಮಾಡಿದೆ. 

ಲಂಕೇಶ್ವರ ರಾವಣನಾಗಿ ಯಶ್ ಅಭಿನಯಿಸಿದ್ದು, ಬಾಲಿವುಡ್ ನಟ ರಣಬೀರ್ ಕಪೂರ್ ಶ್ರೀರಾಮನ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಸಾಯಿ ಪಲ್ಲವಿ ಸೀತೆಯಾಗಿ ಕಾಣಿಸಿಕೊಂಡಿದ್ದಾರೆ. 
 
 ನಿತೇಶ್ ತಿವಾರಿ ನಿರ್ದೇಶನ ಮಾಡಿದ್ದಾರೆ. 'ಪ್ರೈಮ್ ಫೋಕಸ್ ಸ್ಟುಡಿಯೋಸ್' ಮಾಲೀಕ ನಮಿತ್ ಮಲ್ಹೋತ್ರಾ ಜೊತೆಗೂಡಿ, ತಮ್ಮದೇ ಸ್ವಂತ ಬ್ಯಾನರ್ 'ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್'ನಡಿ ಯಶ್, ಈ ಬಿಗ್-ಬಜೆಟ್ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.