ಮೂರನೇ ವಾರಕ್ಕೆ 'ರಾಮಾಯಣ': 1,600 ಕೋಟಿ ಗಳಿಕೆ ನಿರೀಕ್ಷೆ!

Ramayana: ರಣಬೀರ್ ಕಪೂರ್ ಮತ್ತು ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ರಾಮಾಯಣ: ರೈಸ್ ಆಫ್ ಎ ಲೆಜೆಂಡ್ʼ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಗಳಿಕೆ ಮುಂದುವರಿಸಿದೆ.

Nov 20, 2026 - 20:10
Nov 20, 2026 - 20:10
ಮೂರನೇ ವಾರಕ್ಕೆ 'ರಾಮಾಯಣ': 1,600 ಕೋಟಿ ಗಳಿಕೆ ನಿರೀಕ್ಷೆ!
ಚಿತ್ರಕೃಪೆ: https://m.rediff.com/

Ramayana: ರಣಬೀರ್ ಕಪೂರ್ ಮತ್ತು ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ರಾಮಾಯಣ: ರೈಸ್ ಆಫ್ ಎ ಲೆಜೆಂಡ್ʼ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಗಳಿಕೆ ಮುಂದುವರಿಸಿದೆ. ಬಿಡುಗಡೆಯಾಗಿ ಮೂರನೇ ವಾರಕ್ಕೆ ಕಾಲಿಟ್ಟಿರುವ ಚಿತ್ರ ವಿಶ್ವಾದ್ಯಂತ ರೂ.1,547.15 ಕೋಟಿ ಗಳಿಕೆ ಮಾಡಿದೆ. 

ಭಾರತದಲ್ಲಿ ಚಿತ್ರದ ಒಟ್ಟು ನಿವ್ವಳ ಗಳಿಕೆ ರೂ.868.74 ಕೋಟಿ ಆಗಿದ್ದು, ವಿದೇಶಿ ಮಾರುಕಟ್ಟೆಗಳಿಂದ ರೂ.515 ಕೋಟಿ ಸಂಗ್ರಹವಾಗಿದೆ. ಬಿಡುಗಡೆಯ 16ನೇ ದಿನವಾದ ಶುಕ್ರವಾರ ಸಂಜೆ 4 ಗಂಟೆಯವರೆಗೆ ಭಾರತದಲ್ಲಿ ರೂ.4.99 ಕೋಟಿ ಗಳಿಸಿದೆ. 

ಇದರಲ್ಲಿ ಹಿಂದಿ ಅವತರಣಿಕೆ ಅತಿ ಹೆಚ್ಚು ಗಳಿಕೆ ಮಾಡಿದೆ. ಇದೀಗ ಸಿನಿಮಾ ರೂ.1,600 ಕೋಟಿ ಗಳಿಕೆಯ ಗುರಿಯತ್ತ ಮುನ್ನಡೆಯುತ್ತಿದೆ. ಚಿತ್ರದ ಎರಡನೇ ಭಾಗ 2028ರ ದೀಪಾವಳಿಗೆ ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ.

ಲಂಕೇಶ್ವರ ರಾವಣನಾಗಿ ಯಶ್ ಕಾಣಿಸಿಕೊಂಡಿದ್ದು, ಬಾಲಿವುಡ್ ನಟ ರಣಬೀರ್ ಕಪೂರ್ ಶ್ರೀರಾಮನ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಸಾಯಿ ಪಲ್ಲವಿ ಸೀತೆಯಾಗಿ ನಟಿಸಿದ್ದಾರೆ. 
 
ನಿರ್ದೇಶಕ ನಿತೇಶ್ ತಿವಾರಿ ಆಕ್ಷನ್ ಕಟ್ ಹೇಳಿದ್ದಾರೆ. ನಮಿತ್ ಮಲ್ಹೋತ್ರಾ ಜೊತೆಗೂಡಿ, ತಮ್ಮದೇ ಸ್ವಂತ ಬ್ಯಾನರ್ 'ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್'ನಡಿ ಯಶ್, ಈ ಮೆಗಾ-ಬಜೆಟ್ ಸಿನಿಮಾವನ್ನು ನಿರ್ಮಿಸಿದ್ದಾರೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.