RBI: ಸಾಲಗಾರರಿಗೆ ಬಿಗ್ ರಿಲೀಫ್.. ರೆಪೋ ದರ ಯಥಾಸ್ಥಿತಿ

RBI: ಭಾರತೀಯ ರಿಸರ್ವ್ ಬ್ಯಾಂಕ್‌ ಸಾಲಗಾರರಿಗೆ ಬಿಗ್ ರಿಲೀಫ್ ನೀಡಿದೆ. 'ಹಣಕಾಸು ನೀತಿ ಸಮಿತಿ' ರೆಪೋ ದರವನ್ನು ಶೇಕಡ 5.25% ನಲ್ಲಿ ಯಥಾಸ್ಥಿತಿಯಲ್ಲಿಡಲು ಇಂದು (ಬುಧವಾರ) ನಡೆದ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಿದೆ.

Aug 5, 2026 - 12:00
Aug 5, 2026 - 12:01
RBI: ಸಾಲಗಾರರಿಗೆ ಬಿಗ್ ರಿಲೀಫ್.. ರೆಪೋ ದರ ಯಥಾಸ್ಥಿತಿ

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್‌ (RBI) ಸಾಲಗಾರರಿಗೆ ಬಿಗ್ ರಿಲೀಫ್ ನೀಡಿದೆ. ಹಣಕಾಸು ನೀತಿ ಸಮಿತಿ (MPC) ರೆಪೋ ದರವನ್ನು ಶೇಕಡ 5.25% ನಲ್ಲಿ ಯಥಾಸ್ಥಿತಿಯಲ್ಲಿಡಲು ಇಂದು (ಬುಧವಾರ) ನಡೆದ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಿದೆ.

ಈ ಬಗ್ಗೆ ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ (Sanjay Malhotra) ಮಾಹಿತಿ ನೀಡಿದ್ದು, ಪಶ್ಚಿಮ ಏಷ್ಯಾ ಸಂಘರ್ಷವು ಜಾಗತಿಕ ಆರ್ಥಿಕತೆಗೆ ಸವಾಲಾಗಿದೆ ಎಂದು ಹೇಳಿದ್ದಾರೆ.

ಭಾರತವು ವಿಶ್ವದಲ್ಲೇ ಅತಿ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿದೆ. ಆಹಾರ ಹಾಗೂ ಇಂಧನ ಬೆಲೆ ಏರಿಕೆಯಿಂದಾಗಿ ಹಣದುಬ್ಬರ ಹೆಚ್ಚಾಗಿದೆ. ಆದರೂ ವ್ಯಾಪಕವಾಗಿಲ್ಲ. ಮುಂದಿನ ದಿನಗಳಲ್ಲಿ ಹಣದುಬ್ಬರ ತಾತ್ಕಾಲಿಕವಾಗಿ ಏರಿಕೆಯಾಗಲಿದೆ. ಈ ಹಣಕಾಸು ವರ್ಷದ 3ನೇ ತ್ರೈಮಾಸಿಕದಲ್ಲಿ ಅದು ಗರಿಷ್ಠ ಮಟ್ಟಕ್ಕೆ ತಲುಪಲಿದೆ. ಆ ನಂತರ ಇಳಿಕೆಯಾಗಲಿದೆ ಎಂದು ತಿಳಿಸಿದ್ದಾರೆ.

'ಎಲ್ ನಿನೊ' ದೊಡ್ಡ ಅಪಾಯವಾಗಿದೆ. ಮಾನ್ಸೂನ್ ಮಳೆ ಆಧಾರಿತ ಕೃಷಿ ಮೇಲೆ ಪರಿಣಾಮ ಬೀರಲಿದ್ದು, ಆರ್ಥಿಕ ಬೆಳವಣಿಗೆಗೆ ತೊಡಕಬಹುದು ಎಂದು ಎಚ್ಚರಿಸಿದ್ದಾರೆ.

ರೆಪೋ ದರ ಯಥಾಸ್ಥಿತಿಯಲ್ಲಿದ್ದರೆ ಗೃಹ ಸಾಲ, ವಾಹನ ಸಾಲ ಹಾಗೂ ವೈಯಕ್ತಿಕ ಸಾಲಗಳ ಮಾಸಿಕ ಕಂತುಗಳು ಯಾವುದೇ ರೀತಿಯಲ್ಲಿ ಬದಲಾಗದೆ ಸ್ಥಿರವಾಗಿರುತ್ತವೆ.

ಇದೇ ಜೂನ್‌ನಲ್ಲಿ ನಡೆದ ಸಭೆಯಲ್ಲಿ ಆರ್‌ಬಿಐ 2027ರ ಹಣಕಾಸು ವರ್ಷದಲ್ಲಿ ಜಿಡಿಪಿ ಬೆಳವಣಿಗೆ ದರವನ್ನು ಶೇಕಡ 6.6% ಗೆ ಪರಿಷ್ಕರಿಸಿತ್ತು. ಅದು ಹಿಂದಿನ ಶೇಕಡ 6.9% ಕ್ಕಿಂತ ಕಡಿಮೆಯಿದೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ಟಿಜಿ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.