Realme C100x: ರಿಯಲ್‌ಮಿ ಸಿ100ಎಕ್ಸ್ ಫೋನ್ ಬಿಡುಗಡೆ.. ಬೆಲೆ ಎಷ್ಟು?
Realme C100x Launched In India: ಹೊಚ್ಚ ಹೊಸ 'ರಿಯಲ್‌ಮಿ ಸಿ100ಎಕ್ಸ್' ಸ್ಮಾರ್ಟ್‌ಫೋನ್ ಬಿಡುಗಡೆಗೊಂಡಿದೆ. ರೂ.14,499 ದರವನ್ನು ಪಡೆದಿದೆ.
ಬೆಂಗಳೂರು: ಅಗ್ಗದ ದರದಲ್ಲಿ ಹೊಚ್ಚ ಹೊಸ ಸ್ಮಾರ್ಟ್‌ಫೋನ್‌ವೊಂದನ್ನು ಖರೀದಿಸಲು ಪ್ಲ್ಯಾನ್ ಮಾಡಿದ್ದೀರಾ.. ನಿನ್ನೆಯಷ್ಟೇ ರಿಯಲ್‌ಮಿ ಸಿ100ಎಕ್ಸ್ (Realme C100x) ಫೋನ್ ಬಿಡುಗಡೆಗೊಂಡಿದೆ.
ಇದು 4GB + 64GB RAM ಇಂಟರ್ನಲ್ ಸ್ಟೋರೇಜ್‌ನೊಂದಿಗೆ ದೊರೆಯಲಿದ್ದು, ರೂ.14,499 ಬೆಲೆಯನ್ನು ಹೊಂದಿದೆ. ಫ್ಲಿಪ್‌ಕಾರ್ಟ್ ಹಾಗೂ ರಿಯಲ್‌ಮಿ ಪ್ಲಾಟ್‌ಫಾರ್ಮ್‌ನಲ್ಲಿ ಮೂಲಕ ಗ್ರಾಹಕರ ಖರೀದಿಗೆ ಲಭ್ಯವಿದೆ. 8,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದಿದೆ. ಆಕ್ಟಾ ಕೋರ್ Unisoc T7250 ಚಿಪ್‌ಸೆಟ್ ಪ್ರೊಸೆಸರ್‌ನ್ನು ಒಳಗೊಂಡಿದೆ. 45ಡಬ್ಲ್ಯೂ ಫಾಸ್ಟ್ ಚಾರ್ಜಿಂಗ್ ಆಯ್ಕೆಯನ್ನು ತನ್ನದಾಗಿಸಿಕೊಂಡಿದೆ.
ಈ ಸ್ಮಾರ್ಟ್‌ಫೋನ್ 6.8-ಇಂಚಿನ HD+ ಎಲ್‌ಸಿಡಿ ಡಿಸ್‌ಪ್ಲೇಯನ್ನು ಒಳಗೊಂಡಿದೆ. 120Hz ರಿಫ್ರೆಶ್ ರೇಟ್ & ಪಂಡಾ ಗ್ಲಾಸ್ ರಕ್ಷಣೆಯನ್ನು ಪಡೆದಿದೆ. 50MP ಮುಖ್ಯ ಕ್ಯಾಮೆರಾ ಹಾಗೂ 5MP ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಡೀಪ್‌ಬ್ಲೂ ಟೈಡ್ಸ್ ಹಾಗೂ ಗೋಲ್ಡನ್ ಕೋಸ್ಟ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.


