Realme P4s: ರಿಯಲ್‌ಮಿ ಪಿ4ಎಸ್ ಫೋನ್ ಬಿಡುಗಡೆಗೆ ಡೇಟ್ ಫಿಕ್ಸ್!
Realme P4s 5G: ಹೊಸ 'ರಿಯಲ್‌ಮಿ ಪಿ4ಎಸ್ 5ಜಿ' ಸ್ಮಾರ್ಟ್‌ಫೋನ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಆ.26 ರಂದು ಮಧ್ಯಾಹ್ನ 12 ಗಂಟೆಗೆ ಮಾರಾಟಕ್ಕೆ ಬರಲಿದೆ.
ಹೊಸ ರಿಯಲ್‌ಮಿ ಪಿ4ಎಸ್ 5ಜಿ (Realme P4s 5G) ಸ್ಮಾರ್ಟ್‌ಫೋನ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಆ.26 ರಂದು ಮಧ್ಯಾಹ್ನ 12 ಗಂಟೆಗೆ ಮಾರಾಟಕ್ಕೆ ಬರಲಿದೆ.
ಇದು 6GB + 128GB, 8GB + 128GB ಹಾಗೂ 12 GB + 256GB ಇಂಟರ್ನಲ್ ಸ್ಟೋರೇಜ್‌ನ್ನು ಹೊಂದಿರುವ ಸಾಧ್ಯತೆಯಿದೆ. ರೂ.15,999 ರಿಂದ ರೂ.19,499 ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯಬಹುದು ಎಂದು ಅಂದಾಜಿಸಲಾಗಿದೆ.
ಬೃಹದಾಕಾರದ 8,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿರಲಿದ್ದು, 80W ಅಲ್ಟ್ರಾ ಫಾಸ್ಟ್ ಚಾರ್ಜಿಂಗ್ ಆಯ್ಕೆಯನ್ನು ಬೆಂಬಲಿಸಬಲ್ಲದು. ಕೇವಲ 28 ನಿಮಿಷಗಳಲ್ಲಿ ಚಾರ್ಜ್ ಆಗಬಲ್ಲದು ಎನ್ನಲಾಗಿದೆ.
50MP ಪ್ರೈಮರಿ ಕ್ಯಾಮೆರಾವನ್ನು ಹೊಂದಿರಲಿದೆ. 1.5K ರೆಸಲ್ಯೂಶನ್ ಒಳಗೊಂಡಿರುವ 'ಸ್ಯಾಮ್ ಸ್ಯಾಂಗ್' ಎಂ14 ಒಎಲ್ಇಡಿ ಡಿಸ್‌ಪ್ಲೇಯನ್ನು ಪಡೆದಿರುವ ನಿರೀಕ್ಷೆಯಿದೆ. ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಅಲ್ಟ್ರಾ ಚಿಪ್‌ಸೆಟ್ ಪ್ರೊಸೆಸರ್‌ನ್ನು ಪಡೆದಿರಲಿದೆ. ಜೊತೆಗೆ ವಿವಿಧ ಬಣ್ಣಗಳೊಂದಿಗೂ ಸಿಗಬಹುದು ಎಂದು ಹೇಳಲಾಗಿದೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.