VIDEO: ರಾವಣನಾಗಿ ಯಶ್ ಅಬ್ಬರ.. ರಾಮಾಯಣ ಟ್ರೈಲರ್ ರಿಲೀಸ್
Ramayana: ರಾಕಿಂಗ್ ಸ್ಟಾರ್ ಯಶ್ ನಟನೆಯ ಪ್ಯಾನ್-ಇಂಡಿಯಾ ಸಿನಿಮಾ 'ರಾಮಾಯಣ'ದ ಟ್ರೈಲರ್ ಇಂದು (ಗುರುವಾರ) ಬೆಳಗ್ಗೆ 4:15ರ ಬ್ರಾಹ್ಮಿ ಮುಹೂರ್ತದಲ್ಲಿ ಬಿಡುಗಡೆಗೊಂಡಿದೆ.
ರಾಕಿಂಗ್ ಸ್ಟಾರ್ ಯಶ್ (Rocking Star Yash) ನಟನೆಯ ಪ್ಯಾನ್-ಇಂಡಿಯಾ ಸಿನಿಮಾ 'ರಾಮಾಯಣ'ದ ಟ್ರೈಲರ್ ಇಂದು (ಗುರುವಾರ) ಬೆಳಗ್ಗೆ 4:15ರ ಬ್ರಾಹ್ಮಿ ಮುಹೂರ್ತದಲ್ಲಿ ಬಿಡುಗಡೆಗೊಂಡಿದೆ. ಸದ್ಯ, 4 ನಿಮಿಷ 10 ಸೆಕೆಂಡಿನ ಈ ಕಿರು ದೃಶ್ಯ-ವೈಭವಕ್ಕೆ ಪ್ರೇಕ್ಷಕರಿಂದಲೂ ಉತ್ತಮ ರೆಸ್ಪಾನ್ಸ್ ವ್ಯಕ್ತವಾಗುತ್ತಿದೆ. 10 ಲಕ್ಷಗೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸಖತ್ ಟ್ರೆಂಡ್ ಆಗುತ್ತಿದೆ.
ಲಂಕೇಶ್ವರ ರಾವಣನಾಗಿ ಯಶ್ ಅಬ್ಬರಿಸಿದ್ದಾರೆ. ಬಾಲಿವುಡ್ ನಟ ರಣಬೀರ್ ಕಪೂರ್ ಶ್ರೀರಾಮನಾಗಿ ಕಾಣಿಸಿಕೊಂಡಿದ್ದು, ಸಾಯಿ ಪಲ್ಲವಿ ಸೀತೆಯ ಪಾತ್ರಕ್ಕೆ ಜೀವ ತುಂಬಿದ್ದಾರೆ. ಲಕ್ಷ್ಮಣನಾಗಿ ರವಿ ದುಬೆ ಹಾಗೂ ಹನುಮಂತನಾಗಿ ಸನ್ನಿ ಡಿಯೋ ಬಣ್ಣ ಹಚ್ಚಿದ್ದಾರೆ.
ನಿತೇಶ್ ತಿವಾರಿ ಆಕ್ಷನ್ ಕಟ್ ಹೇಳಿದ್ದಾರೆ. 'ಪ್ರೈಮ್ ಫೋಕಸ್ ಸ್ಟುಡಿಯೋಸ್' ಮಾಲೀಕ ನಮಿತ್ ಮಲ್ಹೋತ್ರಾ ಜೊತೆಗೂಡಿ ತಮ್ಮದೇ ಸ್ವಂತ ಬ್ಯಾನರ್ 'ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್'ನಡಿ ಯಶ್, ಈ ಬಿಗ್-ಬಜೆಟ್ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.
ಹ್ಯಾನ್ಸ್ ಜಿಮ್ಮರ್ ಹಾಗೂ ಎ.ಆರ್.ರೆಹಮಾನ್ ಸಂಗೀತ ನೀಡಿದ್ದಾರೆ. ಇದೇ ದೀಪಾವಳಿ ವೇಳೆಗೆ 'ರಾಮಾಯಣ' ಅದ್ದೂರಿಯಾಗಿ ತೆರೆ ಕಾಣಲಿದೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್ನಿಂದ ಹಿಡಿದು ಇನ್ಸ್ಟಾ, ಎಕ್ಸ್, ಫೇಸ್ಬುಕ್, ಯೂಟ್ಯೂಬ್, ನ್ಯೂಸ್ ಆಪ್ವರೆಗೆ ಎಲ್ಲ ಡಿಜಿಟಲ್ ಪ್ಲಾಟ್ಫಾರ್ಮ್ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್ಫಾರ್ಮ್ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.