RRB: 'ರೈಲ್ವೆ ನೇಮಕಾತಿ ಮಂಡಳಿ' ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್ ನೀಡಿದೆ. ಟ್ರೈನ್ಸ್ ಕ್ಲರ್ಕ್, ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್, ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್ ಮತ್ತು ಜೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ನ.13 ಕಡೆ ದಿನವಾಗಿದೆ.
ಒಟ್ಟು ಹುದ್ದೆ: 1,688 ಹುದ್ದೆಗಳನ್ನು ತುಂಬಲಾಗುತ್ತದೆ.
ಶಿಕ್ಷಣ: ಪಿಯುಸಿ/ 12ನೇ ತರಗತಿ ಉತ್ತೀರ್ಣರಾದವರು ಅರ್ಜಿ ಹಾಕಬಹುದು.
ವಯಸ್ಸು: ಕನಿಷ್ಠ 18 ಹಾಗೂ ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ/ ಒಬಿಸಿಯವರಿಗೆ 3 ವರ್ಷ ವಯೋಮಿತಿಯಲ್ಲಿ ಸಡಿಲಿಕೆಯಿದೆ.
ವೇತನ: ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್ ಹುದ್ದೆಗೆ ರೂ.21,700 ಹಾಗೂ ಉಳಿದ ಹುದ್ದೆಗಳಿಗೆ ರೂ.19,900 ಮೂಲ ಸಂಬಳವಿದೆ.
ಅರ್ಜಿಶುಲ್ಕ: ಎಲ್ಲಾ ಅಭ್ಯರ್ಥಿಗಳಿಗೆ ರೂ.500 ಶುಲ್ಕವಿದೆ. ಎಸ್‌ಸಿ ಹಾಗೂ ಪರಿಶಿಷ್ಟ ಎಸ್‌ಟಿ, ಮಾಜಿ ಸೈನಿಕರು, ಪಿಡಬ್ಲ್ಯೂಬಿಡಿ, ಮಹಿಳೆ, ತೃತೀಯ ಲಿಂಗಿ, ಅಲ್ಪಸಂಖ್ಯಾತರು ಅಥವಾ ಇಬಿಸಿ ಅಭ್ಯರ್ಥಿಗಳಿಗೆ ರೂ.250 ಶುಲ್ಕವಿದೆ.