RRB: 1,688 ಹುದ್ದೆ.. ಪಿಯುಸಿ ಆಗಿದ್ರೆ ಸಾಕು!
RRB: 'ರೈಲ್ವೆ ನೇಮಕಾತಿ ಮಂಡಳಿ' ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. 1,688 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
RRB: 'ರೈಲ್ವೆ ನೇಮಕಾತಿ ಮಂಡಳಿ' ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಟ್ರೈನ್ಸ್ ಕ್ಲರ್ಕ್, ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್, ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್ ಹಾಗೂ ಜೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.
ಒಟ್ಟು ಹುದ್ದೆ: 1,688 ಹುದ್ದೆಗಳನ್ನು ತುಂಬಲಾಗುತ್ತದೆ.
ವಿದ್ಯಾರ್ಹತೆ: ಪಿಯುಸಿ ಅಥವಾ 12ನೇ ತರಗತಿ ಉತ್ತೀರ್ಣರಾದವರು ಅರ್ಜಿ ಸಲ್ಲಿಕೆ ಮಾಡಬಹುದು.
ವಯೋಮಿತಿ: ಕನಿಷ್ಠ 18 ಮತ್ತು ಗರಿಷ್ಠ 30 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಹಾಗೂ ಪರಿಶಿಷ್ಟ ಪಂಗಡ (ಎಸ್‌ಟಿ) ಅಭ್ಯರ್ಥಿಗಳಿಗೆ 5 ವರ್ಷ/ ಒಬಿಸಿಯವರಿಗೆ 3 ವರ್ಷ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
ಸಂಬಳ: ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್ ಹುದ್ದೆಗೆ ರೂ.21,700 ಮತ್ತು ಉಳಿದ ಹುದ್ದೆಗಳಿಗೆ ರೂ.19,900 ಮೂಲ ವೇತನವಿದೆ.
ಅರ್ಜಿಶುಲ್ಕ: ಎಲ್ಲಾ ಅಭ್ಯರ್ಥಿಗಳಿಗೆ ರೂ.500 ಶುಲ್ಕವಿದೆ. ಮೊದಲ ಹಂತದ 'ಸಿಬಿಟಿ' ಪರೀಕ್ಷೆಗೆ ಹಾಜರಾದ ಬಳಿಕ, ಬ್ಯಾಂಕ್ ಶುಲ್ಕಗಳನ್ನು ಕಡಿತಗೊಳಿಸಿ, ರೂ.400 ಮೊತ್ತವನ್ನು ಮರುಪಾವತಿಸಲಾಗುತ್ತದೆ.
ಇತರೆ ಪರಿಶಿಷ್ಟ ಜಾತಿ (ಎಸ್‌ಸಿ) ಹಾಗೂ ಪರಿಶಿಷ್ಟ ಪಂಗಡ (ಎಸ್‌ಟಿ), ಮಾಜಿ ಸೈನಿಕರು, ಪಿಡಬ್ಲ್ಯೂಬಿಡಿ, ಮಹಿಳೆ, ತೃತೀಯ ಲಿಂಗಿ, ಅಲ್ಪಸಂಖ್ಯಾತರು ಅಥವಾ ಆರ್ಥಿಕವಾಗಿ ಹಿಂದುಳಿದ ವರ್ಗದ (ಇಬಿಸಿ) ಅಭ್ಯರ್ಥಿಗಳಿಗೆ ರೂ.250 ಶುಲ್ಕವನ್ನು ನಿಗದಿಪಡಿಸಲಾಗಿದೆ. 1ನೇ ಹಂತದ 'ಸಿಬಿಟಿ' ಪರೀಕ್ಷೆ ಬರೆದ ನಂತರ, ಬ್ಯಾಂಕ್ ಶುಲ್ಕಗಳನ್ನು ಕಡಿತಗೊಳಿಸಿ, ಆ ಶುಲ್ಕವನ್ನು ವಾಪಾಸ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಕಡೆ ದಿನ: ನ.13ಕ್ಕೆ ಕೊನೆಯಾಗಲಿದ್ದು, ಹೆಚ್ಚಿನ ಮಾಹಿತಿ: https://www.rrbapply.gov.in/ಗೆ ಸಂಪರ್ಕಿಸಬಹುದು.