ರೈಲ್ವೆಯಲ್ಲಿ 3,548 ಹುದ್ದೆ.. ಡಿಗ್ರಿ ಪಾಸ್ ಆಗಿದ್ರೆ ಸಾಕು!
RRB: 'ರೈಲ್ವೆ ನೇಮಕಾತಿ ಮಂಡಳಿ' ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. 3,548 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
RRB: 'ರೈಲ್ವೆ ನೇಮಕಾತಿ ಮಂಡಳಿ' ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಚೀಫ್ ಕಮರ್ಷಿಯಲ್ ಕಮ್ ಟಿಕೆಟ್ ಸೂಪರ್ವೈಸರ್, ಗೂಡ್ಸ್ ಟ್ರೈನ್ ಮ್ಯಾನೇಜರ್, ಜೂನಿಯರ್ ಅಕೌಂಟೆಂಟ್ ಅಸಿಸ್ಟೆಂಟ್ ಕಮ್ ಟೈಪಿಸ್ಟ್ ಹಾಗೂ ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ ಎಂಬ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
ಒಟ್ಟು ಹುದ್ದೆ: 3,548 ಹುದ್ದೆಗಳನ್ನು ತುಂಬಲಾಗುತ್ತದೆ.
ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ 'ಪದವಿ' ಉತ್ತೀರ್ಣರಾಗಿರಬೇಕು.
ವಯೋಮಿತಿ: ಕನಿಷ್ಠ 18 ಹಾಗೂ ಗರಿಷ್ಠ 33 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಹಾಗೂ ಪರಿಶಿಷ್ಟ ಪಂಗಡ (ಎಸ್‌ಟಿ) ಅಭ್ಯರ್ಥಿಗಳಿಗೆ 5 ವರ್ಷ/ ಒಬಿಸಿಯವರಿಗೆ 3 ವರ್ಷ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
ವೇತನ: ಚೀಫ್ ಕಮರ್ಷಿಯಲ್ ಕಮ್ ಟಿಕೆಟ್ ಸೂಪರ್ವೈಸರ್ ಹುದ್ದೆಗೆ ರೂ.35,400 ಹಾಗೂ ಜೂನಿಯರ್ ಅಕೌಂಟೆಂಟ್ ಅಸಿಸ್ಟೆಂಟ್ ಕಮ್ ಟೈಪಿಸ್ಟ್ & ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ ಹುದ್ದೆಗೆ ರೂ.29,200 ಮೂಲ ವೇತನವಿದೆ.
ಅರ್ಜಿ ಶುಲ್ಕ: ಎಲ್ಲಾ ಅಭ್ಯರ್ಥಿಗಳಿಗೆ ರೂ.500 ಶುಲ್ಕವಿದೆ. ಮೊದಲ ಹಂತದ 'ಸಿಬಿಟಿ' ಪರೀಕ್ಷೆಗೆ ಹಾಜರಾದ ಬಳಿಕ, ಬ್ಯಾಂಕ್ ಶುಲ್ಕಗಳನ್ನು ಕಡಿತಗೊಳಿಸಿ, ರೂ.400 ಮೊತ್ತವನ್ನು ಮರುಪಾವತಿಸಲಾಗುತ್ತದೆ.
ಇತರೆ ಪರಿಶಿಷ್ಟ ಜಾತಿ (ಎಸ್‌ಸಿ) ಹಾಗೂ ಪರಿಶಿಷ್ಟ ಪಂಗಡ (ಎಸ್‌ಟಿ), ಮಾಜಿ ಸೈನಿಕರು, ಪಿಡಬ್ಲ್ಯೂಬಿಡಿ, ಮಹಿಳೆ, ತೃತೀಯ ಲಿಂಗಿ, ಅಲ್ಪಸಂಖ್ಯಾತರು ಅಥವಾ ಆರ್ಥಿಕವಾಗಿ ಹಿಂದುಳಿದ ವರ್ಗದ (ಇಬಿಸಿ) ಅಭ್ಯರ್ಥಿಗಳಿಗೆ ರೂ.250 ಶುಲ್ಕವನ್ನು ನಿಗದಿಪಡಿಸಲಾಗಿದೆ. 1ನೇ ಹಂತದ 'ಸಿಬಿಟಿ' ಪರೀಕ್ಷೆ ಬರೆದ ನಂತರ, ಬ್ಯಾಂಕ್ ಶುಲ್ಕಗಳನ್ನು ಕಡಿತಗೊಳಿಸಿ, ಆ ಶುಲ್ಕವನ್ನು ವಾಪಾಸ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಕಡೆ ದಿನ: ನವೆಂಬರ್ 6ಕ್ಕೆ ಕೊನೆಯಾಗುತ್ತದೆ. ಅರ್ಜಿ ಸಲ್ಲಿಸಲು ಪಾವತಿಸಲು ನವೆಂಬರ್ 8 ಕಡೆ ದಿನವಾಗಿದೆ. ಹೆಚ್ಚಿನ ಮಾಹಿತಿಗೆ https://www.rrbapply.gov.in/ಗೆ ಸಂಪರ್ಕಿಸಿರಿ.