RRB: ರೈಲ್ವೆಯಲ್ಲಿ 3,548 ಹುದ್ದೆ.. ಡಿಗ್ರಿ ಮುಗಿಸಿದ್ರೆ ಸಾಕು, ನಾಳೆ ಕಡೆ ದಿನ

RRB: 'ರೈಲ್ವೆ ನೇಮಕಾತಿ ಮಂಡಳಿ' ಭರ್ಜರಿ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 3,548 ಹುದ್ದೆಗಳನ್ನು ತುಂಬಲಾಗುತ್ತದೆ. ನಾಳೆ ಅರ್ಜಿ ಸಲ್ಲಿಸಲು ಕಡೆ ದಿನವಾಗಿದೆ.

Nov 5, 2026 - 20:15
RRB: ರೈಲ್ವೆಯಲ್ಲಿ 3,548 ಹುದ್ದೆ.. ಡಿಗ್ರಿ ಮುಗಿಸಿದ್ರೆ ಸಾಕು, ನಾಳೆ ಕಡೆ ದಿನ

RRB: 'ರೈಲ್ವೆ ನೇಮಕಾತಿ ಮಂಡಳಿ' ಭರ್ಜರಿ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಚೀಫ್ ಕಮರ್ಷಿಯಲ್ ಕಮ್ ಟಿಕೆಟ್ ಸೂಪರ್ವೈಸರ್, ಗೂಡ್ಸ್ ಟ್ರೈನ್ ಮ್ಯಾನೇಜರ್, ಜೂನಿಯರ್ ಅಕೌಂಟೆಂಟ್ ಅಸಿಸ್ಟೆಂಟ್ ಕಮ್ ಟೈಪಿಸ್ಟ್ ಹಾಗೂ ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

ಒಟ್ಟು ಹುದ್ದೆ: 3,548 ಹುದ್ದೆಗಳನ್ನು ತುಂಬಲಾಗುತ್ತದೆ. 

ಶಿಕ್ಷಣ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ 'ಪದವಿ' ಪಾಸ್ ಆಗಿರಬೇಕು.

ವಯಸ್ಸು: ಕನಿಷ್ಠ 18 & ಗರಿಷ್ಠ 33 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಎಸ್‌ಸಿ ಹಾಗೂ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ/ ಒಬಿಸಿಯವರಿಗೆ 3 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇದೆ.

ವೇತನ: ಚೀಫ್ ಕಮರ್ಷಿಯಲ್ ಕಮ್ ಟಿಕೆಟ್ ಸೂಪರ್ವೈಸರ್ ಹುದ್ದೆಗೆ ರೂ.35,400 ಮತ್ತು ಜೂನಿಯರ್ ಅಕೌಂಟೆಂಟ್ ಅಸಿಸ್ಟೆಂಟ್ ಕಮ್ ಟೈಪಿಸ್ಟ್ & ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ ಹುದ್ದೆಗೆ ರೂ.29,200 ಮೂಲ ವೇತನವಿದೆ.

ಅರ್ಜಿ ಸಲ್ಲಿಸಲು ಕಡೆ ದಿನ: ನ.6ಕ್ಕೆ ಕೊನೆಯಾಗುತ್ತದೆ. ಹೆಚ್ಚಿನ ಮಾಹಿತಿಗೆ https://www.rrbapply.gov.in/ಗೆ ಸಂಪರ್ಕಿಸಿರಿ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.