RRB: ರೈಲ್ವೆ ಇಲಾಖೆಯಿಂದ ಭರ್ಜರಿ ಸಿಹಿಸುದ್ದಿ.. 4,098 ಹುದ್ದೆಗೆ ಪ್ರಕಟಣೆ

RRB: ರೈಲ್ವೆ ನೇಮಕಾತಿ ಮಂಡಳಿ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಒಟ್ಟು 4,098 ಜೂನಿಯರ್ ಎಂಜಿನಿಯರ್ ಹುದ್ದೆಗಳ ಭರ್ತಿಗೆ ಪ್ರಕಟಣೆ ಹೊರಡಿಸಿದೆ.

Jul 24, 2026 - 15:56
RRB: ರೈಲ್ವೆ ಇಲಾಖೆಯಿಂದ ಭರ್ಜರಿ ಸಿಹಿಸುದ್ದಿ.. 4,098 ಹುದ್ದೆಗೆ ಪ್ರಕಟಣೆ

ರೈಲ್ವೆ ನೇಮಕಾತಿ ಮಂಡಳಿ (RRB), ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ.  ಜೂನಿಯರ್ ಎಂಜಿನಿಯರ್ (JE) ಹುದ್ದೆಗಳ ಭರ್ತಿಗೆ ಪ್ರಕಟಣೆ ಹೊರಡಿಸಿದೆ.

ಒಟ್ಟು 4,098 ಹುದ್ದೆಗಳನ್ನು ತುಂಬಲಾಗುತ್ತದೆ. ಸಂಬಂಧಪಟ್ಟ ವಿಷಯದಲ್ಲಿ ಡಿಪ್ಲೊಮಾ ಬಿಇ/ ಬಿ.ಟೆಕ್ ಪದವಿ ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಕನಿಷ್ಠ 18 ಹಾಗೂ ಗರಿಷ್ಠ 33 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು, ನಿಯಮಾನುಸಾರ ಸಡಿಲಿಕೆ ನೀಡಲಾಗಿದೆ. 

ಈ ಹುದ್ದೆಗೆ ಆಯ್ಕೆಯಾದವರಿಗೆ ತಿಂಗಳಿಗೆ ರೂ.35,400 ಮೂಲ ವೇತನ ಕೊಡಲಾಗುತ್ತದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿ, ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ಇದೇ ಆಗಸ್ಟ್ 14 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಲಿದ್ದು, ಸೆಪ್ಟೆಂಬರ್ 13 ಕಡೆ ದಿನವಾಗಿದೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.