SAIL: ಯಂಗ್ ಪ್ರೊಫೆಷನಲ್ ಹುದ್ದೆಗೆ ಅರ್ಜಿ.. ಜುಲೈ 31 ಕಡೆ ದಿನ

SAIL: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಯಂಗ್ ಪ್ರೊಫೆಷನಲ್ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಿದೆ.

Jul 28, 2026 - 16:41
Jul 28, 2026 - 18:36
SAIL: ಯಂಗ್ ಪ್ರೊಫೆಷನಲ್ ಹುದ್ದೆಗೆ ಅರ್ಜಿ.. ಜುಲೈ 31 ಕಡೆ ದಿನ

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (SAIL) ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಯಂಗ್ ಪ್ರೊಫೆಷನಲ್ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 23 ಹುದ್ದೆಗಳು ಖಾಲಿಯಿವೆ. 

ವಿದ್ಯಾರ್ಹತೆ: ಸಂಬಂಧಪಟ್ಟ ವಿಷಯದಲ್ಲಿ ಬಿಇ, ಬಿ.ಟೆಕ್, ಎಂಸಿಎಂ ಹಾಗೂ ಎಂಬಿಎ ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಸಲ್ಲಿಕೆ ಮಾಡಬಹುದು. ಜೊತೆಗೆ ಕಾರ್ಯಾನುಭವವನ್ನು ಹೊಂದಿರಬೇಕು.

ವಯೋಮಿತಿ: ಕನಿಷ್ಠ 23 ವರ್ಷ ಹಾಗೂ ಗರಿಷ್ಠ 42 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. 

ವೇತನ: ಆಯ್ಕೆಯಾದ ಅಭ್ಯರ್ಥಿಗಳನ್ನು ರೂರ್ಕೆಲಾ ಹಾಗೂ ರಾಂಚಿಯಲ್ಲಿರುವ 'ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ'ದ ವಿವಿಧ ಘಟಕಗಳಿಗೆ ನೇಮಿಸಲಾಗುತ್ತದೆ. ಹುದ್ದೆಗಳಿಗೆ ತಕ್ಕಂತೆ ತಿಂಗಳಿಗೆ ರೂ.70,000 ರಿಂದ ರೂ.1,40,000 ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಜುಲೈ 31 ಕಡೆ ದಿನವಾಗಿದೆ. ರೂ.500 ಅರ್ಜಿ ಶುಲ್ಕವನ್ನು ಪಾವತಿಸಬೇಕು. ಹೆಚ್ಚಿನ ಮಾಹಿತಿಗೆ https://sailcareers.com/ಗೆ ಸಂಪರ್ಕಿಸಿರಿ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.