ಹಿರಿಯ ಸ್ವರ್ಣೋದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ನಿಧನ: ಬಿ.ವೈ.ವಿಜಯೇಂದ್ರ ಸಂತಾಪ

Sarafa Muliya Shyama Bhat Passes Away: ಹಿರಿಯ ಸ್ವರ್ಣೋದ್ಯಮಿ 'ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್' ಸಂಸ್ಥೆಯ ಮಾಲೀಕರಾದ ಸರಾಫ ಮುಳಿಯ ಶ್ಯಾಮ ಭಟ್ ನಿಧನಕ್ಕೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರ ಸಂತಾಪ ಸೂಚಿಸಿದ್ದಾರೆ.

Oct 5, 2026 - 09:42
Oct 5, 2026 - 19:30
ಹಿರಿಯ ಸ್ವರ್ಣೋದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ನಿಧನ: ಬಿ.ವೈ.ವಿಜಯೇಂದ್ರ ಸಂತಾಪ

ಬೆಂಗಳೂರು: ಹಿರಿಯ ಸ್ವರ್ಣೋದ್ಯಮಿ 'ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್' ಸಂಸ್ಥೆಯ ಮಾಲೀಕ ಸರಾಫ ಮುಳಿಯ ಶ್ಯಾಮ ಭಟ್ ನಿಧನಕ್ಕೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರ ಸಂತಾಪ ಸೂಚಿಸಿದ್ದಾರೆ.

ಚಿನ್ನಾಭರಣ, ಬೆಳ್ಳಿ ಹಾಗೂ ವಜ್ರ ವ್ಯವಹಾರ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಮುಳಿಯ ಶ್ಯಾಮ ಭಟ್ ಅವರು, 'ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್' ಸಂಸ್ಥೆಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಸಾಮಾಜಿಕ, ಸಾಹಿತ್ಯ ಕ್ಷೇತ್ರ ಮಾತ್ರವಲ್ಲದೇ ಧಾರ್ಮಿಕ ಕ್ಷೇತ್ರಗಳಿಗೆ ದಾನ ನೀಡುತ್ತಿದ್ದ ಅವರು, ಕೊಡುಗೈ ದಾನಿ ಎಂದೇ ಪ್ರಸಿದ್ಧರಾಗಿದ್ದರು ಎಂದು ತಿಳಿಸಿದ್ದಾರೆ.

ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಕುಟುಂಬದ ಸದಸ್ಯರು, ಬಂಧುಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದ್ದಾರೆ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.