ವಿದ್ಯಾರ್ಥಿವೇತನ ವಿತರಣಾ ಸಮಾರಂಭ: ಡಿಸಿಎಂ ಡಾ.ಜಿ.ಪರಮೇಶ್ವರ ಉದ್ಘಾಟನೆ

Dr.G Parameshwara: ಹಳ್ಳಿಕಾರ್ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿವೇತನ ವಿತರಣಾ ಸಮಾರಂಭವನ್ನು ಇಂದು ಏರ್ಪಡಿಸಲಾಗಿತ್ತು.

Oct 4, 2026 - 13:56
Oct 4, 2026 - 14:31
ವಿದ್ಯಾರ್ಥಿವೇತನ ವಿತರಣಾ ಸಮಾರಂಭ: ಡಿಸಿಎಂ ಡಾ.ಜಿ.ಪರಮೇಶ್ವರ ಉದ್ಘಾಟನೆ

ಬೆಂಗಳೂರು: ಮೈಸೂರು ರಸ್ತೆಯಲ್ಲಿರುವ ಪೂರ್ಣಿಮಾ ಪ್ಯಾಲೇಸ್‌ ಕನ್ವೆನ್ಷನ್ ಹಾಲ್‌ನಲ್ಲಿ ಆರ್‌ಎಂಆರ್‌ ಹಳ್ಳಿಕಾರ್ ಫೌಂಡೇಷನ್ ಟ್ರಸ್ಟ್ ವತಿಯಿಂದ, ಎಸ್‌ಎಸ್‌ಎಲ್‌ಸಿ & ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿಸಿದ ಹಳ್ಳಿಕಾರ್ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿವೇತನ ವಿತರಣಾ ಸಮಾರಂಭವನ್ನು ಇಂದು ಏರ್ಪಡಿಸಲಾಗಿತ್ತು.

ಈ ಕಾರ್ಯಕ್ರಮವನ್ನು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ (Dr.G Parameshwara) ಉದ್ಘಾಟಿಸಿದರು.

ಸಚಿವ ರಾಮಲಿಂಗಾ ರೆಡ್ಡಿ, ಹೆಚ್.ಸಿ.ಬಾಲಕೃಷ್ಣ, ಟಿ.ರಘಮೂರ್ತಿ, ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ,  ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ, ವಿಧಾನ ಪರಿಷತ್ ಸದಸ್ಯ ಸಿ.ಪುಟ್ಟಣ್ಣ, ಆರ್‌ಎಂಆರ್‌ ಹಳ್ಳಿಕಾರ್ ಫೌಂಡೇಷನ್ ಟ್ರಸ್ಟ್‌ನ ಅಧ್ಯಕ್ಷ ಕೆ.ಎಂ.ನಾಗರಾಜ್ ಮುಂತಾದವರು ಉಪಸ್ಥಿತರಿದ್ದರು.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.