ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ (Dakshina Kannada) ಮಳೆ ಮುಂದುವರಿದಿರುವ ಕಾರಣ, ನಾಳೆಯೂ (ಆ.4) ಮಂಗಳೂರು ಉಪ ವಿಭಾಗದಲ್ಲಿ ಅಂಗನವಾಡಿ & ಶಾಲೆಗಳಿಗೆ ಮಾತ್ರ ಹಾಗೂ ಪುತ್ತೂರು ಉಪ ವಿಭಾಗದಲ್ಲಿ ಶಾಲೆ & ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮಂಗಳೂರು, ಬಂಟ್ವಾಳ, ಮೂಡಬಿದಿರೆ, ಮುಲ್ಕಿ, ಉಳ್ಳಾಲ ತಾಲೂಕಿನ ಎಲ್ಲ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ (10ನೇ ತರಗತಿವರೆಗೆ ಮಾತ್ರ) ರಜೆಯಿದೆ. ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನಲ್ಲಿ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆಯನ್ನು ನೀಡಿ ಜಿಲ್ಲಾಧಿಕಾರಿ ದರ್ಶನ್ ಅವರು ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ನೇತ್ರಾವತಿ ನದಿ ಸೇರಿದಂತೆ ಪ್ರಮುಖ ನದಿಗಳು ಉಕ್ಕಿ ಹರಿಯುತ್ತಿವೆ. ಕೆಲವು ತಾಲೂಕುಗಳಲ್ಲಿ ಮಳೆ ನೀರು ತಗ್ಗು ಪ್ರದೇಶಗಳಿಗೆ ನುಗ್ಗಿದ ಹಿನ್ನಲೆಯಲ್ಲಿ ಜನಜೀವನವೂ ಅಸ್ತವ್ಯಸ್ತಗೊಂಡಿದೆ. ಈ ಕಾರಣಗಳಿಂದ ದಕ್ಷಿಣ ಕನ್ನಡದಲ್ಲಿ ಕಳೆದ ಮೂರು ದಿನಗಳಿಂದ ಶಾಲೆ ಹಾಗೂ ಕಾಲೇಜುಗಳಿಗೆ ರಜೆಯನ್ನು ಕೊಡಲಾಗುತ್ತಿದೆ.
ಕಳೆದ ಶನಿವಾರವು ಶಾಲೆ ಹಾಗೂ ಕಾಲೇಜುಗಳಿಗೆ ಜಿಲ್ಲೆಯಲ್ಲಿ ರಜೆಯನ್ನು ನೀಡಲಾಗಿತ್ತು. ಹಾಗೆಯೇ ಭಾನುವಾರ ಹೊರತುಪಡಿಸಿದರೆ ಸೋಮವಾರವೂ ರಜೆಯನ್ನು ಘೋಷಣೆ ಮಾಡಲಾಗಿತ್ತು. ಇದೀಗ ಮಂಗಳವಾರ ಅಂದರೆ ಆ.4ರಂದು ಕೂಡ ಮಂಗಳೂರು ಸೇರಿದಂತೆ ಐದು ತಾಲೂಕುಗಳಲ್ಲಿ ಶಾಲೆ & ಪ್ರೌಢ ಶಾಲೆಗಳಿಗೆ ಹಾಗೂ ಬೆಳ್ತಂಗಡಿ, ಪುತ್ತೂರು ಸೇರಿದಂತೆ ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ನಾಲ್ಕು ತಾಲೂಕುಗಳ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಉಡುಪಿ ಜಿಲ್ಲೆಯಲ್ಲಿಯೂ ಶಾಲೆಗಳಿಗೆ ರಜೆ ಘೋಷಣೆ:
ಭಾರೀ ಮಳೆಯ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತೆ ಆ.4ರಂದು ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಿ ಅಲ್ಲಿನ ಜಿಲ್ಲಾಧಿಕಾರಿಗಳಾದ ಟಿ.ಕೆ.ಸ್ವರೂಪ ಅವರು ಆದೇಶ ಹೊರಡಿಸಿದ್ದಾರೆ. ಕರಾವಳಿ ಭಾಗದಲ್ಲಿ ಮಂಗಳವಾರವೂ ಭಾರೀ ಮಳೆಯಾಗುವ ಮುನ್ಸೂಚನೆಯಿರುವ ಕಾರಣ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಶಾಲೆಗಳಿಗೆ ಮಾತ್ರ ರಜೆಯನ್ನು ಕೊಡಲಾಗಿದೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.