ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಶಿರೂರು ಮಠದ ಶ್ರೀ ವೇದ ವರ್ಧನತೀರ್ಥ ಸ್ವಾಮೀಜಿಯಿಂದ ವಿದ್ಯಾರ್ಥಿಗಳಿಗೆ ಆಶೀರ್ವಚನ

ಶಕ್ತಿನಗರದ ಶಕ್ತಿ ರೆಸಿಡೆನ್ಸಿಯಲ್ ಶಾಲೆ ಮತ್ತು ಶಕ್ತಿ ಪದವಿ ಪೂರ್ವ ಕಾಲೇಜಿಗೆ ಗುರುವಾರ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಆಗಮಿಸಿ ಇಲ್ಲಿನ ವಿದ್ಯಾರ್ಥಿಗಳಿಗೆ ಆಶೀರ್ವಚನ ನೀಡಿದ್ದಾರೆ.

Jan 8, 2026 - 16:30
ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಶಿರೂರು ಮಠದ ಶ್ರೀ ವೇದ ವರ್ಧನತೀರ್ಥ ಸ್ವಾಮೀಜಿಯಿಂದ ವಿದ್ಯಾರ್ಥಿಗಳಿಗೆ ಆಶೀರ್ವಚನ
Shree vedavardhana thirtha swamiji visited Mangalore Shakthi College

ಮಂಗಳೂರು: ಶಕ್ತಿನಗರದ ಶಕ್ತಿ ರೆಸಿಡೆನ್ಸಿಯಲ್ ಶಾಲೆ ಮತ್ತು ಶಕ್ತಿ ಪದವಿ ಪೂರ್ವ ಕಾಲೇಜಿಗೆ ಗುರುವಾರ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಆಗಮಿಸಿ ಇಲ್ಲಿನ ವಿದ್ಯಾರ್ಥಿಗಳಿಗೆ ಆಶೀರ್ವಚನ ನೀಡಿದ್ದಾರೆ.

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಜನವರಿ 18ರಂದು ನಡೆಯಲ್ಲಿರುವ ಪರ್ಯಾಯದಲ್ಲಿ ಸರ್ವಾಜ್ಞ ಪೀಠಕ್ಕೆರುತ್ತಿರುವ ಹಿನ್ನಲೆಯಲ್ಲಿ ಸಂಸ್ಥೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಹಿತವಚನಗಳನ್ನು ನುಡಿದಿದ್ದಾರೆ. ದಾನಗಳಲ್ಲಿ ಅನ್ನದಾನ ಶ್ರೇಷ್ಠ ದಾನ ವಿದ್ಯಾದಾನ. ವಿದ್ಯೆಯು ಮಹಾದಾನ. ನಾವೆಲ್ಲಾ ಶಾಲೆಗೆ ಬರುವ ಉದ್ದೇಶ ಒಟ್ಟಾಗಿ ಕಲಿಯುವುದಕ್ಕೆ. ನಾವು ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಪ್ರಾಮಾಣಿಕ ಪ್ರಯತ್ನದ ಜೊತೆ ಆ ಭಗವಂತನಲ್ಲಿ ಪ್ರಾರ್ಥನೆ ಮಾಡಬೇಕು. ರಜಾ ದಿನಗಳಲ್ಲಿ ಪ್ರವಾಸಕ್ಕೆಂದು ಬೇರೆಲ್ಲೋ ಹೋಗುವ ಬದಲು ಉಡುಪಿಯ ಶ್ರೀ ಕೃಷ್ಣನ ಸನ್ನಿಧಾನಕ್ಕೆ ಬಂದು ಕೃಷ್ಣನ ಸೇವೆ ಮಾಡಿ ಭಗವಂತನ ಕೃಪೆಗೆ ಪಾತ್ರರಾಗಿ. ಜನವರಿ 18ರಂದು ನಡೆಯುವ ಪರ್ಯಾಯೋತ್ಸವದಲ್ಲಿ ತಾವೆಲ್ಲರೂ ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ಎಂದು ಆಮಂತ್ರಿಸುತ್ತ ಮಕ್ಕಳಿಗೆ ಶುಭ ಕೋರಿದರು. 


ಪ್ರಾರಂಭದಲ್ಲಿ ಶಾಲೆಯ ಶಿಕ್ಷಕೀಯರು ಸ್ವಾಮೀಜಿಗೆ ಪೂರ್ಣಕುಂಭದ ಸ್ವಾಗತವನ್ನು ಕೋರಿದರು. ಶಾಲೆಗೆ ಆಗಮಿಸಿದ ಶ್ರೀಗಳು ಶ್ರೀಕೃಷ್ಣನಿಗೆ ಪುಪ್ಪರ್ಚನೆ ಮಾಡಿದರು. ತದ ನಂತರ ವಿದ್ಯಾರ್ಥಿಗಳ ಬೆಳಗ್ಗಿನ ಪ್ರಾರ್ಥನೆಯಲ್ಲಿ ಭಾಗವಹಿಸಿದರು. ಸಂಸ್ಥೆಯ ಸಂಸ್ಥಾಪಕರಾದ ಡಾ.ಕೆ.ಸಿ. ನಾಕ್ ಮತ್ತು ಅವರ ಧರ್ಮಪತ್ನಿ, ಸಂಸ್ಥೆಯ ಟ್ರಸ್ಟಿಯಾದ ಶ್ರೀಮತಿ ಸಗುಣ ಸಿ ನಾಕ್ ಅವರು ಸ್ವಾಮೀಜಿಯವರಿಗೆ ಶಾಲು ಹೊದಿಸಿ ಫಲಪುಷ್ಪವನ್ನು ನೀಡಿದರು. ನಂತರ ಪೂಜ್ಯ ಶ್ರೀಗಳು ಸಂಸ್ಥೆಯ ಪ್ರಮುಖರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಂತ್ರಕ್ಷತೆಯನ್ನು ನೀಡಿ ಆಶಿರ್ವಾದಿಸಿದರು.

ಈ ಸಂದರ್ಭದಲ್ಲಿ ತುಳುನಾಡು ಎಜ್ಯುಕೇಶನ್ ಟ್ರಸ್ಟ್‌ನ ಕಾರ್ಯದರ್ಶಿಗಳಾದ ಪ್ರದೀಪ ಕುಮಾರ್ ಕಲ್ಕೂರ, ತುಳುನಾಡು ಎಜುಕೇಷನ್ ಟ್ರಸ್ಟ್‌ನ ಟ್ರಷ್ಟಿ ಸುಧಾಕರ ರಾವ್ ಪೇಜಾವರ, ಶಕ್ತಿ ವಿದ್ಯಾ ಸಂಸ್ಥೆಯ ಸಂಸ್ಥಾಪಕರಾದ ಡಾ ಕೆ. ಸಿ. ನಾಕ್, ಶಕ್ತಿ ವಿದ್ಯಾ ಸಂಸ್ಥೆಯ ಟ್ರಸ್ಟಿ ಸಗುಣ ಸಿ. ನಾಕ್, ಶಕ್ತಿ ವಿದ್ಯಾ ಸಂಸ್ಥೆಯ ಪ್ರಧಾನ ಸಲಹೆಗಾರರಾದ ರಮೇಶ್ ಕೆ., ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ್ ಮೂರ್ತಿ, ಶಕ್ತಿ ವಸತಿ ಶಾಲಾ ಪ್ರಾಂಶುಪಾಲರಾದ ಬಬಿತಾ ಸೂರಜ್ ಉಪಸ್ಥಿತರಿದ್ದರು. ಶಿಕ್ಷಕ ಶರಣಪ್ಪ ಸ್ವಾಗತಿಸಿದರು.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.