ಶ್ರೀ ಕ್ಷೇತ್ರ ಹನುಮಗಿರಿ: ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
Shri Kshetra Hanumagiri: ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ನವರಾತ್ರಿ ಉತ್ಸವವು ಅ.11 ರಿಂದ 21 ರವರೆಗೆ ನಡೆಯಲಿದ್ದು, ಸದ್ಯ ಆಮಂತ್ರಣ ಪತ್ರಿಕೆಯನ್ನು ಭಕ್ತಿಭಾವದಿಂದ ಬಿಡುಗಡೆಗೊಳಿಸಲಾಯಿತು.
ಪುತ್ತೂರು: ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ನವರಾತ್ರಿ ಉತ್ಸವವು ಅ.11 ರಿಂದ 21 ರವರೆಗೆ ನಡೆಯಲಿದ್ದು, ಸದ್ಯ ಆಮಂತ್ರಣ ಪತ್ರಿಕೆಯನ್ನು ಭಕ್ತಿಭಾವದಿಂದ ಬಿಡುಗಡೆಗೊಳಿಸಲಾಯಿತು.
ಮಧೂರು ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಪ್ರಧಾನ ಅರ್ಚಕ ಕೃಷ್ಣ ಉಪಾಧ್ಯಾಯ ಹಾಗೂ ಸಾಮಾಜಿಕ ಕಾರ್ಯಕರ್ತ ಆರ್.ಸಿ.ನಾರಾಯಣ್ ಅವರು, ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಹೊರತಂದು, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಈ ನವರಾತ್ರಿ ಉತ್ಸವವನ್ನು ಭಕ್ತಿಭಾವ ಮತ್ತು ವೈಭವದಿಂದ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಉತ್ಸವದ ಅಂಗವಾಗಿ, ನವರಾತ್ರಿಯ ಎಲ್ಲಾ ದಿನವು ಭಜನೆ, ದುರ್ಗಾ ಪೂಜೆ, ರಂಗ ಪೂಜೆ , ಅನ್ನದಾನ ನಡೆಯಲಿದೆ. ವಿಜಯದಶಮಿಯಂದು ಕಶೆಕೋಡಿ ಸೂರ್ಯನಾರಾಯಣ ಭಟ್ ಇವಾರ ನೇತೃತ್ವದಲ್ಲಿ ಸಾಮೂಹಿಕ ಚಂಡಿಕಾ ಹವನದೊಂದಿಗೆ ಉತ್ಸವವು ಸಂಪನ್ನಗೊಳ್ಳಲಿದೆ.
ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ದೇವರ ಅನುಗ್ರಹಕ್ಕೆ ಪಾತ್ರರಾಗುವಂತೆ ಹನುಮಗಿರಿ ಕ್ಷೇತ್ರದ ವತಿಯಿಂದ ಕೋರಲಾಗಿದೆ. ನವರಾತ್ರಿ ಉತ್ಸವವು ಯಶಸ್ವಿಯಾಗಿ ನೆರವೇರಲಿ. ನಾಡಿನ ಸಮಸ್ತ ಭಕ್ತರಿಗೆ ಸುಖ, ಶಾಂತಿ, ಆರೋಗ್ಯ ಮತ್ತು ಸಮೃದ್ಧಿ ದೊರೆಯಲಿ ಎಂದು ಪ್ರಾರ್ಥಿಸಲಾಯಿತು.
ಈ ವೇಳೆ ಕ್ಷೇತ್ರದ ಧರ್ಮದರ್ಶಿ ಶಿವರಾಂ ಶರ್ಮ, ಕ್ಷೇತ್ರ ಸಂವರ್ಧನಾ ಸಮಿತಿಯ ಸದಸ್ಯರು ಮತ್ತು ಭಕ್ತಾದಿಗಳು ಹಾಜರಿದ್ದರು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.