ಶೆಟ್ಲ್ ಬ್ಯಾಡ್ಮಿಂಟನ್: ಅಂಬಿಕಾ ಸಂಸ್ಥೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Shuttle Badminton: ಅಂಬಿಕಾ ಪದವಿ ಪೂರ್ವ ವಿದ್ಯಾಲಯ ವಿದ್ಯಾರ್ಥಿಗಳು, ಶೆಟ್ಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Sep 2, 2026 - 12:55
ಶೆಟ್ಲ್ ಬ್ಯಾಡ್ಮಿಂಟನ್: ಅಂಬಿಕಾ ಸಂಸ್ಥೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ಇಲ್ಲಿನ ಸುದಾನ ಸ್ಪೋರ್ಟ್ಸ್ ಕ್ಲಬ್‌ನಲ್ಲಿ, ವಿದ್ಯಾ ಭಾರತಿ ವತಿಯಿಂದ ಈಚೆಗೆ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆ ನಡೆಯಿತು. ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ. 

ಈ ಮೂಲಕ ನವದೆಹಲಿಯಲ್ಲಿ ಅಕ್ಟೋಬರ್‌ ತಿಂಗಳಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಅದಿತಿ ಯು.ಎನ್, ಅವನಿ ಯು.ಎನ್ ಹಾಗೂ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಸಾನ್ವಿ ರಾಧ ಎಸ್ ಆಯ್ಕೆಯಾಗಿದ್ದಾರೆ. 

ವಿದ್ಯಾರ್ಥಿಗಳ ಈ ಸಾಧನೆಯನ್ನು ಸಂಸ್ಥೆಯ ಆಡಳಿತ ಮಂಡಳಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ. 

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.