ಕರಾವಳಿಗೆ ಸಂಪರ್ಕ ಕಲ್ಪಿಸುವ ಈ ಪ್ರಮುಖ ರೈಲುಗಳ ಸಂಚಾರ ರದ್ದು: ಯಾವಾಗ?

South Western Railway: ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ಘಾಟ್ ವಿಭಾಗದಲ್ಲಿ ಹಳಿ ನಿರ್ವಹಣೆ ಹಾಗೂ ನವೀಕರಣ ಕಾಮಗಾರಿ ಹಿನ್ನೆಲೆ, ಅಕ್ಟೋಬರ್‌ನಲ್ಲಿ ಬೆಂಗಳೂರು-ಮಂಗಳೂರು-ಕಾರವಾರ ವಲಯದ ಹಗಲು ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ.ಈ ಬಗ್ಗೆ ನೈಋತ್ಯ ರೈಲ್ವೆ ಮಾಹಿತಿ ನೀಡಿದೆ.

Aug 7, 2026 - 12:43
Aug 7, 2026 - 12:47
ಕರಾವಳಿಗೆ ಸಂಪರ್ಕ ಕಲ್ಪಿಸುವ ಈ ಪ್ರಮುಖ ರೈಲುಗಳ ಸಂಚಾರ ರದ್ದು: ಯಾವಾಗ?

ಮಂಗಳೂರು: ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ಘಾಟ್ ವಿಭಾಗದಲ್ಲಿ ಹಳಿ ನಿರ್ವಹಣೆ ಹಾಗೂ ನವೀಕರಣ ಕಾಮಗಾರಿ ಹಿನ್ನೆಲೆ, ಅಕ್ಟೋಬರ್‌ನಲ್ಲಿ ಬೆಂಗಳೂರು-ಮಂಗಳೂರು-ಕಾರವಾರ ವಲಯದ ಹಗಲು ರೈಲು ಸೇವೆಗಳನ್ನು ರದ್ದು ಮಾಡಲಾಗಿದೆ. ಈ ಬಗ್ಗೆ ನೈಋತ್ಯ ರೈಲ್ವೆ (South Western Railway) ಮಾಹಿತಿ ನೀಡಿದೆ. ಆದರೂ ಪ್ರಯಾಣಿಯರ ಅನುಕೂಲಕ್ಕಾಗಿ, ದಸರಾ ಹಬ್ಬದ ರಜಾ ದಿನಗಳಲ್ಲಿ ರೈಲು ಸೇವೆಗಳು ಎಂದಿನಂತೆ ಇರಲಿವೆ.  

ರೈಲು ಸಂಖ್ಯೆ 16575 ಯಶವಂತಪುರ-ಮಂಗಳೂರು ಜಂಕ್ಷನ್ ಗೋಮಟೇಶ್ವರ ಎಕ್ಸ್‌ಪ್ರೆಸ್‌ನ್ನು ಅಕ್ಟೋಬರ್ 4, 6, 8, 11, 13, 15, 22, 25, 27, 29, ನವೆಂಬರ್ 1 ಮತ್ತು 3 ರಂದು ರದ್ದುಗೊಳಿಸಲಾಗಿದೆ. 

ಅದೇ ರೀತಿ ವಾಪಸ್ ಆಗುವ ರೈಲು ಸಂಖ್ಯೆ 16576 ಮಂಗಳೂರು ಜಂಕ್ಷನ್-ಯಶವಂತಪುರ ಗೋಮಟೇಶ್ವರ ಎಕ್ಸ್‌ಪ್ರೆಸ್‌, ಅಕ್ಟೋಬರ್ 5, 7, 9, 12, 14, 16, 23, 26, 28, 30, ನವೆಂಬರ್ 2 ಹಾಗೂ 4 ರಂದು ಸಂಚರಿಸುವುದಿಲ್ಲ. 

ರೈಲು ಸಂಖ್ಯೆ 16515 ಯಶವಂತಪುರ-ಕಾರವಾರ ಎಕ್ಸ್‌ಪ್ರೆಸ್ ಎಕ್ಸ್‌ಪ್ರೆಸ್‌ನ್ನು ಅಕ್ಟೋಬರ್ 5, 7, 9, 12, 14, 21, 23, 26, 28, 30 ಮತ್ತು ನವೆಂಬರ್ 2 ರಂದು ರದ್ದು ಮಾಡಲಾಗಿದೆ.

ಹಾಗೆಯೇ ಹಿಂದಿರುಗುವ ರೈಲು ಸಂಖ್ಯೆ 16516 ಕಾರವಾರ-ಯಶವಂತಪುರ ಎಕ್ಸ್‌ಪ್ರೆಸ್, ಅಕ್ಟೋಬರ್ 6, 8, 10, 13, 15, 22, 24, 27, 29, 31 ಮತ್ತು ನವೆಂಬರ್ 3 ರಂದು ಕಾರ್ಯಚರಣೆ ನಡೆಸುವುದಿಲ್ಲ.

ರೈಲು ಸಂಖ್ಯೆ 16539 ಯಶವಂತಪುರ-ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್‌ಪ್ರೆಸ್‌ನ್ನು ಅಕ್ಟೋಬರ್ 10, 24 ಹಾಗೂ 31 ರಂದು ರದ್ದುಗೊಳಿಸಲಾಗಿದೆ. 

ಅದೇ ರೀತಿ ವಾಪಸ್ ಆಗುವ ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್-ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್, ಅಕ್ಟೋಬರ್ 11, 25 ಮತ್ತು ನವೆಂಬರ್ 1 ರಂದು ಸಂಚಾರ ಮಾಡುವುದಿಲ್ಲ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.