ಮಂಗಳೂರು: ನ.26ಕ್ಕೆ ವಿಶೇಷ ಚೇತನರ ಕ್ರೀಡಾಕೂಟ

Mangaluru: ನ.26ರಂದು ಜಿಲ್ಲಾ ಮಟ್ಟದ ವಿಶೇಷ ಚೇತನರ ಕ್ರೀಡಾಕೂಟವನ್ನು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಆಯೋಜಿಸಲಾಗಿದೆ.

Nov 20, 2026 - 21:53
Nov 20, 2026 - 21:54
ಮಂಗಳೂರು: ನ.26ಕ್ಕೆ ವಿಶೇಷ ಚೇತನರ ಕ್ರೀಡಾಕೂಟ
ಚಿತ್ರಕೃಪೆ: https://www.tribuneindia.com/

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗಳ ಸಹಯೋಗದಲ್ಲಿ ನ.26ರಂದು ಜಿಲ್ಲಾ ಮಟ್ಟದ ವಿಶೇಷ ಚೇತನರ ಕ್ರೀಡಾಕೂಟವನ್ನು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಆಯೋಜಿಸಲಾಗಿದೆ.

ಅಂದು ಬೆಳಿಗ್ಗೆ 9.30ಕ್ಕೆ ಕ್ರೀಡಾಕೂಟ ಆರಂಭವಾಗಲಿದ್ದು, ವಿಶೇಷ ಚೇತನರ ಪಥಸಂಚಲನ, 50 ಮೀ ಮತ್ತು 100 ಮೀ ಓಟ, 50 ಮೀ ನಡಿಗೆ, ಸಾಫ್ಟ್‌ಬಾಲ್ ಎಸೆತ, ಟೆನ್ನಿಸ್ ಬಾಲ್ ಎಸೆತ ಮತ್ತು ಶಾಟ್‌ಪುಟ್ ಸ್ಪರ್ಧೆಗಳು ನಡೆಯಲಿವೆ.

ಆಸಕ್ತ ವಿಶೇಷ ಚೇತನ ಕ್ರೀಡಾಪಟುಗಳು ನವೆಂಬರ್ 24 ರೊಳಗೆ  8073246937, 9448529254 ದೂರವಾಣಿ ಸಂಖ್ಯೆಗೆ ಕರೆ ಮಾಡಿ, ಹೆಸರು ನೋಂದಾಯಿಸಿಕೊಳ್ಳಬಹುದು. 

ಗರಿಷ್ಠ 200 ಸ್ಪರ್ಧಿಗಳಿಗೆ ಮಾತ್ರ ಅವಕಾಶವಿದ್ದು, ಮೊದಲು ನೋಂದಾಯಿಸಿಕೊಂಡವರಿಗೆ ಆದ್ಯತೆ ನೀಡಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.