ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು: ಗುರು ಪೂರ್ಣಿಮಾ - ವೇದವ್ಯಾಸ ಜಯಂತಿ ಆಚರಣೆ
Sri Krishna Educational Institutions: ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ವತಿಯಿಂದ ಬುಧವಾರ ಗುರು ಪೂರ್ಣಿಮಾ - ವೇದವ್ಯಾಸ ಜಯಂತಿ ಆಚರಣೆ ಮಾಡಲಾಯಿತು.
ಪುತ್ತೂರು (ಪಟ್ಟೆ ಬಡಗನ್ನೂರು): ವೇದವ್ಯಾಸರ ಹೆಸರಲ್ಲಿರುವ 'ವೇದ' ಮತ್ತು 'ವ್ಯಾಸ' ಎಂಬುವುದರಲ್ಲಿ ಅವರು ಮಾಡಿರುವಂತಹ ಕೆಲಸ ಅಡಗಿದೆ. ವೇದವ್ಯಾಸರು ಹಿಂದೂ ಧರ್ಮದಲ್ಲಿ ಅತ್ಯಂತ ಪೂಜನೀಯರು. ಅವರ ಜ್ಞಾನ ಹಾಗೂ ಪರೋಪಕಾರ ದೃಷ್ಟಿ ನಮ್ಮೆಲ್ಲರ ಜೀವನಕ್ಕೆ ಆದರ್ಶವಾಗಲಿ ಎಂದು ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ನಿರ್ದೇಶಕ ಗಣರಾಜ ಕುಂಬ್ಳೆ ಹೇಳಿದರು.
ಇಲ್ಲಿ ಬುಧವಾರ ನಡೆದ 'ವೇದವ್ಯಾಸ ಜಯಂತಿ ಆಚರಣೆ' ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ಸಂಸ್ಥೆಯ ಸಂಚಾಲಕ ವಿಘ್ನೇಶ್ ಹಿರಣ್ಯ ಪ್ರಾಸ್ತಾವಿಕ ಮಾತುಗಳನ್ನಾಡಿ, ವೇದವ್ಯಾಸ ಜಯಂತಿಯ ಆಚರಣೆ ಮಹತ್ವವನ್ನು ವಿದ್ಯಾರ್ಥಿಗೆ ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಪ್ರತಿಭಾ ಪ್ರೌಢಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಲಿಂಗಪ್ಪ ಗೌಡ ಮೂಡಿಕೆ, ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಕೇಶವ ಪ್ರಸಾದ್ ನೀಲಗಿರಿ, ಶ್ರೀ ಕೃಷ್ಣ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಸತೀಶ್ ಕೊಪ್ಪಳ, ಪ್ರೌಢಶಾಲಾ ಮುಖ್ಯಶಿಕ್ಷಕಿ ಸುಮನಾ ಬಿ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ರಾಜಗೋಪಾಲ್ ಎನ್ ಹಾಗೂ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕಿ ಪುಷ್ಪಾವತಿ ಭಾಗವಹಿಸಿದ್ದರು.
1 ರಿಂದ 4ನೇ ತರಗತಿ ವಿದ್ಯಾರ್ಥಿಗಳಿಗಾಗಿ ಮಹಾಭಾರತ ಚಲನಚಿತ್ರವನ್ನು ಪ್ರದರ್ಶನ ಮಾಡಲಾಯಿತು. 5ನೇ ತರಗತಿ ವಿದ್ಯಾರ್ಥಿಗಳು ಮಹರ್ಷಿ ವೇದವ್ಯಾಸರ ಮಹಿಮೆ ಎಂಬ ರೂಪಕವನ್ನು ಪ್ರದರ್ಶಿಸಿದರು. 6ನೇ ತರಗತಿ ವಿದ್ಯಾರ್ಥಿಗಳು ಭಗವದ್ಗೀತೆಯನ್ನು ಪಠಣ ಮಾಡಿದರು. 7ನೇ ತರಗತಿ ವಿದ್ಯಾರ್ಥಿಗಳು ಸಪ್ತ ಋಷಿಗಳ ಪರಿಚಯವನ್ನು ಮಾಡಿಕೊಟ್ಟರು.

8ನೇ ತರಗತಿಯ ವಿದ್ಯಾರ್ಥಿಗಳು ಮಹಾಭಾರತದ ಉಪಾಖ್ಯಾನಗಳನ್ನು ಹೇಳಿದರು. 9ನೇ ತರಗತಿ ವಿದ್ಯಾರ್ಥಿಗಳಿಂದ ಶ್ರೀಮದ್ ಭಗವದ್ಗೀತೆಯ 15ನೇ ಅಧ್ಯಾಯದ 20 ಶ್ಲೋಕಗಳನ್ನು ಪಠಣ ಮಾಡಿದರು. 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಮಹಾಭಾರತಕ್ಕೆ ಸಂಬಂಧಪಟ್ಟ ರಸಪ್ರಶ್ನೆಯನ್ನು ನಡೆಸಲಾಯಿತು.
ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ಶಿಕ್ಷಕ ವರ್ಗ ಈ ಎಲ್ಲಾ ಕಾರ್ಯಕ್ರಮಗಳನ್ನು ನಿರ್ವಹಿಸಿದರು. ಸುಮನಾ ಬಿ ಸ್ವಾಗತಿಸಿದರು ಪುಷ್ಪಾವತಿ ಧನ್ಯವಾದ ಅರ್ಪಿಸಿದರು. ಚಿತ್ರಾ ಕಾರ್ಯಕ್ರಮ ನಿರೂಪಿಸಿದರು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.