ಶ್ರೀ ಮಹಾಲಿಂಗೇಶ್ವರ ದೇಗುಲದ ದೇವರುಮಾರು ಗದ್ದೆಯಲ್ಲಿ ಗಿರಿಜಾ ಕಲ್ಯಾಣೋತ್ಸವ!

Sri Mahalingeshwara Temple: ಪುತ್ತೂರಿನ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ, ಗಿರಿಜಾ ಕಲ್ಯಾಣೋತ್ಸವ ನಡೆಯಲಿದೆ.

Sep 24, 2026 - 11:48
ಶ್ರೀ ಮಹಾಲಿಂಗೇಶ್ವರ ದೇಗುಲದ ದೇವರುಮಾರು ಗದ್ದೆಯಲ್ಲಿ ಗಿರಿಜಾ ಕಲ್ಯಾಣೋತ್ಸವ!

ಪುತ್ತೂರು: ಪಟ್ಟಣದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ, ಗಿರಿಜಾ ಕಲ್ಯಾಣೋತ್ಸವ ನಡೆಯಲಿದೆ. ಶ್ರೀ ಮಹಾಲಿಂಗೇಶ್ವರ ದೇವರ ಅಪ್ಪಣೆಗಾಗಿ ಪ್ರಾರ್ಥನೆ ನೆರವೇರಿಸಲಾಯಿತು. 

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ, ಕಳೆದ 3 ವರ್ಷಗಳಿಂದ ಲಕ್ಷಾಂತರ ಭಕ್ತರನ್ನು ಒಗ್ಗೂಡಿಸಿ ಆರಿಸುತ್ತಿದ್ದ ಶ್ರೀನಿವಾಸ ಕಲ್ಯಾಣೋತ್ಸವ ಸಂಪನ್ನಗೊಂಡಿದೆ. 

ಈ ಬಾರಿ ಮಹಾಲಿಂಗೇಶ್ವರನ ಪ್ರೀತ್ಯರ್ಥವಾಗಿ, ಗಿರಿಜಾ ಕಲ್ಯಾಣೋತ್ಸವವನ್ನು ನಡೆಸಲು ತೀರ್ಮಾನಿಸಲಾಗಿದೆ. ಡಿಸೆಂಬರ್ ತಿಂಗಳಲ್ಲಿ ದೇವಾಲಯದ ದೇವರುಮಾರು ಗದ್ದೆಯಲ್ಲಿ ಈ ಧಾರ್ಮಿಕ ಕಾರ್ಯಕ್ರಮ ಜರುಗಲಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾಗಲಿದ್ದಾರೆ. 

ಇದಕ್ಕೆ ಪೂರ್ವಭಾವಿಯಾಗಿ ಇದೇ 27ರ ಭಾನುವಾರ ಹಿಂದೂ ಬಂಧುಗಳ ಸಭೆಯಿದ್ದು, ಅಲ್ಲಿ ಗಿರಿಜಾ ಕಲ್ಯಾಣೋತ್ಸವ ಸಮಿತಿ ರಚನೆ ನಡೆಯಲಿದೆ.

ಎರಡು ದಿನ ಜರುಗಿದ ಪ್ರಾರ್ಥನೆಯ ವೇಳೆ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ  ಪದಾಧಿಕಾರಿಗಳು ಉಪಸ್ಥಿತರಿದ್ದರು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.