ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು & ಪ್ರೌಢಶಾಲೆಯಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Sri Ramakunjeshwara PU College & High School: ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು ಮತ್ತು ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

Aug 17, 2026 - 12:05
Aug 17, 2026 - 12:06
ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು & ಪ್ರೌಢಶಾಲೆಯಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

ರಾಮಕುಂಜ: ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು ಮತ್ತು ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಭೂಸೇನೆಯ ನಿವೃತ್ತ ಯೋಧ ರಾಧಾಕೃಷ್ಣ ಆನ ಧ್ವಜಾರೋಹಣ ನೆರವೇರಿಸಿದರು. ಶ್ರೀರಾಮಕುಂಜೇಶ್ವರ ವಿದ್ಯಾವರ್ಧಕ ಸಭಾ, ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ ಅತಿಥಿಗಳನ್ನು ಸ್ವಾಗತಿಸಿದರು.

ಮುಖ್ಯ ಭಾಷಣಕಾರರಾಗಿ ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗದ ನಿವೃತ್ತ ಮುಖ್ಯಸ್ಥ ಡಾ.ತಾಳ್ತಜೆ ವಸಂತಕುಮಾರ್ ಭಾಗವಹಿಸಿ, ಸ್ವಾತಂತ್ರ್ಯ ದಿನಾಚರಣೆಯ ಮಹತ್ವ, ದೇಶಭಕ್ತಿ ಮತ್ತು ವಿದ್ಯಾರ್ಥಿಗಳ ಜವಾಬ್ದಾರಿಗಳ ಕುರಿತು ಮಾತನಾಡಿದರು.

ವಿದ್ಯಾರ್ಥಿಗಳು 'ಸ್ವಾತಂತ್ರ್ಯ ದಿನಾಚರಣೆ'ಯ ಅಂಗವಾಗಿ ಭಾಷಣ, ನೃತ್ಯ, ಹಾಡು ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಜೊತೆಗೆ ಸಾಂಸ್ಕೃತಿಕ & ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದ ಪದವಿಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಅತಿಥಿಗಳು ಬಹುಮಾನಗಳನ್ನು ವಿತರಿಸಿದರು. ಆ ಬಳಿಕ ರಸಮಂಜರಿ ನಡೆಯಿತು.

ಪ್ರೌಢಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶ್ ದಾಮ್ಲೆ ಧನ್ಯವಾದ ಅರ್ಪಿಸಿದರು. ಕಾಲೇಜು ಹಾಗೂ ಪ್ರೌಢಶಾಲೆಯ ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.