ಶ್ರೀರಾಮಕುಂಜೇಶ್ವರ ಶಾಲೆ: ಮುಖ್ಯ ಶಿಕ್ಷಕ ಸತೀಶ್ ಭಟ್ ಬಿಳಿನೆಲೆ ನಿವೃತ್ತಿ.. ಬೀಳ್ಕೊಡುಗೆ

Sri Ramakunjeshwara School: ಶ್ರೀರಾಮಕುಂಜೇಶ್ವರ ಶಾಲೆಯ ಮುಖ್ಯ ಶಿಕ್ಷಕರಾದ ರಾಜ್ಯ ಪ್ರಶಸ್ತಿ ಪುರಸ್ಕೃತ ಸತೀಶ್ ಭಟ್ ಬಿಳಿನೆಲೆ ಅವರು ಸೇವಾ ನಿವೃತ್ತಿ ಹೊಂದಿದ್ದು, ಶುಕ್ರವಾರ ಬೀಳ್ಕೊಡುಗೆ ಸಮಾರಂಭ ನಡೆಯಿತು.

Aug 1, 2026 - 14:09
ಶ್ರೀರಾಮಕುಂಜೇಶ್ವರ ಶಾಲೆ: ಮುಖ್ಯ ಶಿಕ್ಷಕ ಸತೀಶ್ ಭಟ್ ಬಿಳಿನೆಲೆ ನಿವೃತ್ತಿ.. ಬೀಳ್ಕೊಡುಗೆ

ಕಡಬ: ರಾಮಕುಂಜದ ಶ್ರೀರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ರಾಜ್ಯ ಪ್ರಶಸ್ತಿ ಪುರಸ್ಕೃತ ಸತೀಶ್ ಭಟ್ ಬಿಳಿನೆಲೆ ಅವರು ಸೇವಾ ನಿವೃತ್ತಿ ಹೊಂದಿದ್ದು, ಶುಕ್ರವಾರ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಈ ವೇಳೆ ವಿದ್ಯಾರ್ಥಿಗಳು ಹಾಗೂ ಹಿರಿಯ ವಿದ್ಯಾರ್ಥಿಗಳು ಅವರಿಗೆ ವಿವಿಧ ಉಡುಗೊರೆಗಳನ್ನು ನೀಡಿ, ತಮ್ಮ ಪ್ರೀತಿ ಮತ್ತು ಗೌರವವನ್ನು ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡು, ಅವರ ಮಾರ್ಗದರ್ಶನ, ಶಿಸ್ತು ಹಾಗೂ ಪ್ರೇರಣಾದಾಯಕ ಬೋಧನೆಯನ್ನು ಸ್ಮರಿಸಿದರು.

ಶಾಲೆಯ ಶಿಕ್ಷಕರೂ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ, ಸತೀಶ್ ಭಟ್ ಅವರು ಉತ್ತಮ ವ್ಯಕ್ತಿತ್ವ, ಸರಳತೆ, ಸಮರ್ಪಣಾ ಮನೋಭಾವ ಮತ್ತು ಆದರ್ಶ ನಾಯಕತ್ವದ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಪ್ರಶಂಸಿಸಿದರು.

ಗಣ್ಯರು ಹಾಗೂ ಶಿಕ್ಷಕರು ಅವರಿಗೆ ಶಾಲು ಹೊದಿಸಿ, ಹಣ್ಣುಗಳ ತಟ್ಟೆ ನೀಡಿ ಸನ್ಮಾನಿಸಿ ಗೌರವ ಸಲ್ಲಿಸಿದರು. ಅಂತಿಮವಾಗಿ ವಿದ್ಯಾರ್ಥಿಗಳು, ಹಿರಿಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾವಪೂರ್ಣವಾಗಿ ಬೀಳ್ಕೊಟ್ಟು, ಅವರ ನಿವೃತ್ತಿ ಜೀವನವು ಉತ್ತಮ ಆರೋಗ್ಯ, ಸಂತೋಷ, ನೆಮ್ಮದಿ ಹಾಗೂ ಇನ್ನಷ್ಟು ಸಮಾಜಮುಖಿ ಸೇವೆಯಿಂದ ಕೂಡಿರಲಿ ಎಂದು ಹಾರೈಸಿದರು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.