ಶ್ರೀರಾಮಕುಂಜೇಶ್ವರ ಶಾಲೆ: ನೂತನ ಮುಖ್ಯ ಶಿಕ್ಷಕರಾಗಿ ವೆಂಕಟೇಶ ದಾಮ್ಲೆ ಅಧಿಕಾರ ಸ್ವೀಕಾರ
Sri Ramakunjeshwara School: ರಾಮಕುಂಜದ ಶ್ರೀರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ನೂತನ ಮುಖ್ಯ ಶಿಕ್ಷಕರಾಗಿ ವೆಂಕಟೇಶ್ ದಾಮ್ಲೆ ಅಧಿಕಾರ ಸ್ವೀಕರಿಸಿದ್ದಾರೆ.
ಕಡಬ: ರಾಮಕುಂಜದ ಶ್ರೀರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ನೂತನ ಮುಖ್ಯ ಶಿಕ್ಷಕರಾಗಿ ವೆಂಕಟೇಶ್ ದಾಮ್ಲೆ ಅಧಿಕಾರ ಸ್ವೀಕರಿಸಿದ್ದಾರೆ. ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ರಾಜ್ಯ ಪ್ರಶಸ್ತಿ ಪುರಸ್ಕೃತ ಸತೀಶ್ ಭಟ್ ಸೇವಾ ನಿವೃತ್ತಿ ಹೊಂದಿದ್ದು, ಅವರಿಂದ ತೆರವಾದ ಜಾಗಕ್ಕೆ ನೇಮಕಗೊಂಡಿದ್ದಾರೆ.
ವೆಂಕಟೇಶ ದಾಮ್ಲೆ ದೀರ್ಘಕಾಲದಿಂದ ಶಾಲೆಯಲ್ಲಿ ಗಣಿತ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರ ನೇತೃತ್ವದಲ್ಲಿ ಶಾಲೆ ಇನ್ನಷ್ಟು ಅಭಿವೃದ್ಧಿಯತ್ತ ಸಾಗಲಿ ಎಂದು ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ಹಳೆಯ ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.